Sunday, July 13, 2025
Sunday, July 13, 2025

Madhu Bangarappa ಸರ್ಕಾರ ವಿಕಲಚೇತನರಿಗೆ ಸಾಮಾಜಿಕ ಸಮಾನತೆ ತರಲು ಅನೇಕ ಯೋಜನೆ ಜಾರಿಗೆ ತಂದಿದೆ- ಮಧು ಬಂಗಾರಪ್ಪ

Date:

Madhu Bangarappa ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ ವಿಕಲಚೇತನರಿಗೆ ಮೂಡಬಾರದು ಎಂದು ಸರ್ಕಾರ ವಿಕಲಚೇತನರಿಗೆ ಸಮಾಜದಲ್ಲಿ ಸಮಾನತೆಯನ್ನು ತರಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದಾದರು ಯೋಜನೆಗಳಲ್ಲಿ ಅನುದಾನದ ಕೊರತೆ ಅಥವಾ ಇನ್ನಾವುದೇ ರೀತಿಯ ತೊಂದರೆ ಉಂಟಾದರೆ ನನ್ನ ಗಮನಕ್ಕೆ ತನ್ನಿ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಮ್ಮ ಕೆಲಸ ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿರಬಾರದು ಅನುಷ್ಠಾನ ಮತ್ತು ಸೇವೆ ನೀಡುವಲ್ಲಿ ಮುಂದಾಗಬೇಕು ಎಂದರು.
Madhu Bangarappa ರಾಜ್ಯದ ಎಲ್ಲಾ ಅನುದಾನಿತ ವಿಕಲಚೇತನರ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾಧ್ಯಹ್ನದ ಬಿಸಿಊಟ ಯೋಜನೆ ವಿಸ್ತರಿಲಾಗುವುದು. ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗುವುದು. ವಿಕಲಚೇತನ ಮಕ್ಕಳಿಗೆ ಈ ಯೋಜನೆಗಳು ತಲುಪಬೇಕಾಗಿದ್ದು ಶಿಕ್ಷಣ ಇಲಾಖೆ ಅಡಿಯಲ್ಲಿ ಸಿಗುವ ಉಚಿತ ಸಮವಸ್ತ್ರ, ಶೂ, ಹಾಗೂ ಇನ್ನಿತರ ಸೌಲಭ್ಯಗಳನ್ನು ರಾಜ್ಯದ ಎಲ್ಲಾ ವಿಕಲಚೇತನರ ಮಕ್ಕಳ ಶಾಲೆಗಳಿಗೆ ವಿಸ್ತರಿಸಲು ಕೂಡಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಡಿಐಆರ್‌ಟಿ ಕಾರ್ಯಕ್ರಮದ ಅಡಿ ಶಿಕ್ಷಕರು ವಿಕಲಚೇತನ ಮಕ್ಕಳ ಮನೆಗಳಿಗೆ ತೆರಳಿ ಅವರಿಗೆ ಅಗತ್ಯವಿರುವ ಸೌಲಭ್ಯ, ತರಬೇತಿ ನೀಡುವರು. ಇದನ್ನು ಅವರು ಉಪಯೋಗಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ 5 ಗ್ಯಾರಂಟಿಗಳ ಮೂಲಕ ಜೊತೆ ಸಮಾಜದಲ್ಲಿ ಸಮಾನತೆಯನ್ನು ನೀಡುವ ಅನೇಕ ಕೆಲಸವನ್ನು ಮಾಡುತ್ತಿದೆ. ಇಂದು ಜಿಲ್ಲೆಯ ಎಲ್ಲಾ ತಾಲೂಕುಗಳ 53 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು ಅತ್ಯಂತ ಜಾಗರೂಕತೆಯಿಂದ ವಾಹನ ಚಾಲಾಯಿಸಬೇಕು. ಮಕ್ಕಳ ಕೈಯಲ್ಲಿ ವಾಹನ ಎಂದು ಎಚ್ಚರಿಕೆ ಮಾತು ಹೇಳಿದರು.
ಈ ವೇಳೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲುö್ಯ ಮತ್ತು ಎಂಆರ್‌ಡಬ್ಲುö್ಯ ಗಳು, ತಾವು ಅನೇಕ ವರ್ಷಗಳಿಂದ ಗೌರವಧನದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು ಸೇವೆ ಖಾಯಂಗೊಳಿಸುವAತೆ ಸಚಿವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಚಂದ್ರಭೂಪಾಲ್, ಸೂಡಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶಶಿರೇಖಾ, ಶಾರದಾ ಅಂಧರ ವಿಕಾಸ ಶಾಲೆಯ ಮುಖ್ಯಸ್ಥರಾದ ಈಶ್ವರ್ ಭಟ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...