Gurupur BGS School College ಸಂಸ್ಕೃತಿ ಹಾಗೂ ಸಂಸ್ಕಾರವಿಲ್ಲದ ಬದುಕು ಅರ್ಥವಿಲ್ಲದ್ದು, ಮಕ್ಕಳಲ್ಲಿ ನಾವು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಹುಟ್ಟು ಹಾಕಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ನಿತ್ಯ ಶ್ರಮ ವಹಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಶಾಖಾಮಠದ ಪೂಜ್ಯ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಶಿವಮೊಗ್ಗದ ಗುರುಪುರ ಬಿಜಿಎಸ್ ಶಾಲಾ ಕಾಲೇಜಿನ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ , ಸಂಸ್ಕೃತಿ, ಸಂಸ್ಕಾರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ , ಶಿಕ್ಷಕರು ಕೇವಲ ಪಾಠ ಪ್ರವಚನಕ್ಕೆ ಮಾತ್ರ ಸೀಮಿತವಾಗದೆ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರಗೆಳೆಯಬೇಕು. ಅದರ ಜೊತೆಗೆ ಪಾಲಕರು ಹಾಗೂ ಶಿಕ್ಷಕರು, ಮಕ್ಕಳು ಅನಗತ್ಯವಾಗಿ ಮೊಬೈಲ್ ಬಳಕೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಮಕ್ಕಳು ಕಲಿಕೆಯ ಜೊತೆ ಸಂಸ್ಕಾರ ಮತ್ತು ತಮ್ಮ ಮುಂದಿನ ಗುರಿಗಳ ಬಗ್ಗೆ ನಿಖರವಾದ ಉದ್ದೇಶಗಳನ್ನು ಹೊಂದುವ ಅಗತ್ಯವಿದೆ. ನಾಳಿನ ಸುಂದರ ಬದುಕನ್ನು ರೂಪಿಸಿಕೊಳ್ಳಲು ದೇಶದ ಪ್ರಜ್ಞಾವಂತ ನಾಗರೀಕನಾಗಲು ಚಿಂತನೆ ನಡೆಸಬೇಕಿದೆ. ದೇಶಕ್ಕೆ, ನನ್ನ ಊರಿಗೆ, ನನ್ನ ಜಿಲ್ಲೆಗೆ ಏನಾದರೂ ಕೊಡುಗೆ ನೀಡುವಂತಹ ಸಮಾಜಮುಖಿ ಮನಸ್ಸು ಬೆಳೆಸಿಕೊಳ್ಳಬೇಕಿದೆ ಎಂದರು.
Gurupur BGS School College ಕಾರ್ಯಕ್ರಮ ದಲ್ಲಿ ಸಂಸ್ಥೆಯ ನಿರ್ದೇಶಕರಾದ ಹಿರಿಯಣ್ಣ ಹೆಗಡೆ,ಬಿಜಿಎಸ್ ಗುರುಕುಲ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಶಿಕ್ಷಕರು, ಉಪನ್ಯಾಸಕರು,ಸಿಬ್ಬಂದಿ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು, ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಕ್ರೀಡೆಯನ್ನು ಏರ್ಪಡಿಸಿದ್ದು ಕ್ರೀಡೆಯಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.