District Chamber of Commerce Shivamogga ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ( ಎಸ್‌ಐಡಿಬಿಐ-ಸಿಡ್ಬಿ) ಶಾಖೆಯನ್ನು ಶಿವಮೊಗ್ಗಕ್ಕೆ ತರುವಲ್ಲಿ ಶ್ರಮಿಸಿದ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿರುವ ಸಣ್ಣ ಕೈಗಾರಿಕೆಗಳು, 3,500 ಎಂಎಸ್‌ಎಂಇ ಹಾಗೂ ಹೊಸ ಉದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ತುಂಬಾ ಅನುಕೂಲ ಒದಗಿಸಲಿದೆ. ಹೊಸ ಉದ್ಯಮಗಳ ಸ್ಥಾಪನೆಯಿಂದ ಹೆಚ್ಚು ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
ಸಿಡ್ಬಿ ಶಾಖೆ ಸ್ಥಾಪನೆಯಿಂದ ಹೊಸದಾಗಿ ಸ್ಥಾಪನೆಯಾಗುವ ಉದ್ಯಮಕ್ಕೆ ಆರ್ಥಿಕವಾಗಿ ಶಕ್ತಿ ತುಂಬಲಿದೆ. ಹೊಸ ಹೊಸ ಉದ್ಯಮಿಗಳಿಗೆ ಸಾಲ ಸೌಲಭ್ಯ ಸಿಗಲಿದೆ. ಶಿವಮೊಗ್ಗ ಜಿಲ್ಲೆಯು ಪ್ರವಾಸೋದ್ಯಮ, ಕೈಗಾರಿಕೆ, ಆಹಾರ ಉತ್ಪನ್ನ ಕೈಗಾರಿಕಾ ಘಟಕದ ಉದ್ಯಮಕ್ಕೂ ಹೆಚ್ಚು ಅವಕಾಶಗಳಿವೆ. ಸಿಡ್ಬಿ ಶಾಖೆಯಿಂದ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ತುಂಬಾ ಅನುಕೂಲವಾಗಲಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ತಿಳಿಸಿದ್ದಾರೆ.
District Chamber of Commerce Shivamogga ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ( ಸಿಡ್ಬಿ ) ಶಾಖೆಯನ್ನು ಶಿವಮೊಗ್ಗ ಜಿಲ್ಲೆಗೆ ತರುವಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಪ್ರಯತ್ನ ಅಪಾರ. ಶಾಖೆ ಶೀಘ್ರ ಆರಂಭವಾಗುವುದರಿಂದ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ತಿಳಿಸಿದ್ದಾರೆ.