Department of School Education ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು,ನಮ್ಮ ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆ ಸಹಕಾರಿಯಾಗಿದೆ. ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಅಭಿಪ್ರಾಯಪಟ್ಟರು.
ಅವರು ನೆಹರೂ ಕ್ರೀಡಾಂಗಣದಲ್ಲಿ ಎರಡು ದಿನ ನಡೆಯಲಿರುವ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಹಾಗೂ ಕೇಂಬ್ರಿಡ್ಜ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಕಾಶಿಪುರ,ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅನುದಾನ ರಹಿತ ಪ್ರಾಥಮಿಕ ಶಾಲೆಗಳ ಸಿ ಮತ್ತು ಡಿ ವಲಯಗಳ ವಲಯ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯ ಶಿವಮೊಗ್ಗ ತಾಲ್ಲೂಕಿನ ವಲಯ ಮಟ್ಟದ ಕ್ರೀಡಾ ಕೂಟದ ಧ್ವಜಾರೋಣ ನೆರವೇರಿಸಿ ಮಾತನಾಡುತ್ತಾ, ಆಟದಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ ಎಂದ ಅವರು, ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಅಲ್ಲದೇ ಕ್ರೀಡೆ ಶಿಸ್ತನ್ನು ಕಲಿಸುತ್ತದೆ ಎಂದು ಹೇಳಿದರು.
ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸತತವಾಗಿ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ವಾಗುತ್ತದೆ ಎಂದರು.
Department of School Education ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೇಂಬ್ರಿಡ್ಜ್ ಶಾಲೆಯ ಆಧ್ಯಕ್ಷರಾದ ಬಿ. ಎಸ್. ಯಶೋಧ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಿ. ಹೆಚ್. ನಿರಂಜನ್ ಮೂರ್ತಿ ಅವರು ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಎರಡನ್ನೂ ಸಮನಾವಾಗಿ ನೋಡುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿಗಳಾದ ಎಸ್. ಶಶಿಧರ್, ಪ್ರಾಂಶುಪಾಲರಾದ ಶಾರದಾ ಎಸ್. ನಾಯಕ್ , ಕೇಂಬ್ರಿಡ್ಜ್ ಪಿಯು ಕಾಲೇಜಿನ ಕಾರ್ಯ ದರ್ಶಿ ಪ್ರವೀಣ್, ಸಿ. ಆರ್. ಪಿ. ಚೇತನ್ , ಕೆ. ಜಿ. ಮಠಪತಿ,
ಸಂಘದ ಕಾರ್ಯದರ್ಶಿ ತೇಜಸ್ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಪ್ರಸನ್ನ, ಸೋಮಶೇಖರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬಾಕ್ಸ್ :
Department of School Education ಕ್ರೀಡೆ ಶಿಸ್ತನ್ನು ಕಲಿಸುತ್ತದೆ- ರಮೇಶ್
Date: