Monday, September 30, 2024
Monday, September 30, 2024

Department of Information and Public Relations ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಆಹ್ವಾ‌ನ

Date:

Department of Information and Public Relations ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತು.

ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.
2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

 ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.

Department of Information and Public Relations  2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.
ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ ದಿನಾಂಕ:30-09-2024ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...