Atishi Marlena ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ.
ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದು ಹೊರಬಂದ ಬಳಿಕ ಅರವಿಂದ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು.
Atishi Marlena ಇದೀಗ ಇಂದು ನಡೆದ ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ದೆಹಲಿ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ. ದೆಹಲಿಯ ಕಲ್ಕಾಜಿಯ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಶಾಸಕಿಯಾಗಿರುವ ಅತಿಶ್ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇಂದೇ ಸಿಎಂ ಆಗಿ ಅತಿಶಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ದೆಹಲಿ ಸಿಎಂ ಹುದ್ದೆಗೇರಿದ 3ನೇ ಮಹಿಳೆ ಅತಿಶಿ ಆಗಿದ್ದಾರೆ. ಸುಷ್ಮಾ ಸ್ವರಾಜ್, ಶೀಲಾ ದಿಕ್ಷಿತ್ ಅವರ ನಂತರ ಇದೀಗ ಅತಿಶಿ ಸಿಎಂ ಹುದ್ದೆಗೇರಿದ್ದಾರೆ. ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಲೋಕೋಪಯೋಗಿ, ಶಿಕ್ಷಣ ಸಚಿವೆಯಾಗಿದ್ದರು.
Atishi Marlena ದೆಹಲಿ ಕೇಜ್ರಿವಾಲ್ ಬದಲಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಷಿ ಮರ್ಲೆನಾ ಆಯ್ಕೆ
Date: