Friday, June 19, 2026
Friday, June 19, 2026

Karnataka Lokayukta ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜನರ ಅಹವಾಲು ಸ್ವೀಕಾರ ಸಭೆ

Date:

Karnataka Lokayukta ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟಂಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಸೆ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಸೆ.24 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಸೆ.25 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ Karnataka Lokayukta ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ, ಸೆ.26 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ, ಸೆ-27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...