Holalur Panchayath ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ನಿಲ್ಲಿಸೋಣ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡಲು ಎಲ್ಲರಲ್ಲಿ ಅರಿವು ಮೂಡಿಸೋಣ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಕರೆ ನೀಡಿದರು.
‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Holalur Panchayath ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡುವುದರಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ನಾವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕರು, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
Holalur Panchayath ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು- ಎನ್.ಹೇಮಂತ್
Date: