Wednesday, October 2, 2024
Wednesday, October 2, 2024

Department of Labor ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಅರಿವು ಕಾರ್ಯಗಾರ

Date:

Department of Labor ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗ ನೆಮ್ಮದಿಯಾಗಿರಲೆಂದು ಸರ್ಕಾರ ಅವರಿಗಾಗಿ ಅನೇಕ ಯೋಜನೆಗಳು, ಸೌಲಭ್ಯಗಳನ್ನು ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕೆಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಹೇಳಿದರು.

ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಕಾರ್ಮಿಕ ಇಲಾಖೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಲಭ್ಯವಿರುವ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಮಾಲೀಕರು ಮತ್ತು ಕಾರ್ಮಿಕ ವರ್ಗಕ್ಕೆ ಶುಕ್ರವಾರ ಏರ್ಪಡಿಸಲಾಗಿದ್ದ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಎಂಬ ದೊಡ್ಡ ಯಂತ್ರ ಕಾರ್ಮಿಕರೆಂಬ ಇನ್ನೊಂದು ಯಂತ್ರದಿಂದ ಸುಮಗವಾಗಿ ನಡೆದುಕೊಂಡು ಹೋಗುತ್ತಿದೆ. ಒಂದು ಪಕ್ಷ ಕಾರ್ಮಿಕ ಯಂತ್ರ ಸರಿಯಾಗಿ ಕಾರ್ಯ ನಿರ್ವಹಿಸದೇ ಹೋದರೆ ಅನೇಕ ರೀತಿಯಲ್ಲಿ ತೊಂದರೆ ಎದುರಾಗುತ್ತದೆ. ಆದ್ದರಿಂದ ಕಾರ್ಮಿಕರು ಪ್ರೀತಿ ಮತ್ತು ಶಿಸ್ತಿನಿಂದ ತಮ್ಮ ಕೆಲಸದಲ್ಲಿ ತೊಡಗಿ ಸಮಾಜ ಸುಸ್ಥಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಅನುಕೂಲ ಮಾಡಿಕೊಡಬೇಕು.

Department of Labor ಇಂತಹ ಕಾರ್ಮಿಕ ವರ್ಗದವರ ಜೀವನ ಮಟ್ಟ ಉತ್ತಮವಾಗಿರಲೆಂದು ಸರ್ಕಾರ ಹಲವಾರು ಯೋಜನೆಗಳನ್ನು ಅವರಿಗಾಗಿ ನೀಡಿದೆ. ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ ಮಾಡಿಕೊಟ್ಟು, ಕಾರ್ಮಿಕ ಇಲಾಖೆ ಅವರಿಗೆ ಸಹಕಾರ ನೀಡಲು ಸಜ್ಜಾಗಿದೆ. ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ವಿವರ, ಕೆಲಸದ ವಿವರಗಳನ್ನು ನೀಡಿ ಯೋಜನೆಗಳ ಫಲ ಪಡೆಯಬಹುದು.

ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲು ಕಾರ್ಮಿಕ ಇಲಾಖೆ ಇದೆ. ವಿವಿಧ ಸೌಲಭ್ಯಗಳು, ಅವುಗಳನ್ನು ಪಡೆಯುವ ಕುರಿತು ಅರಿವು ಮೂಡಿಸಲು ಕೈಪಿಡಿ, ವೆಬ್‌ಸೈಟ್‌ಗಳು ಲಭ್ಯವಿದೆ. ಹಾಗೂ ಕಾಲ ಕಾಲಕ್ಕೆ ಮಾಹಿತಿ ನೀಡುವ ಕಾರ್ಯಾಗಾರಗಳು ನಡೆಯುತ್ತಿದ್ದು ಕಾರ್ಮಿಕರು ಇಂತಹ ವೇದಿಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಕುಟುಂಬದ ಜವಾಬ್ದಾರಿ ವ್ಯಕ್ತಿಗಳಾಗಿರುವ ನೀವು ಜಾಗೃತರಾಗಿ ಇತರರಿಗೂ ತಿಳಿಸಬೇಕು. ತಮಗೆ ಅನ್ವಯವಾಗುವ ಯೋಜನೆಗಳಿಗೆ ಮಾತ್ರ ನೋಂದಣಿ ಮಾಡಿಸಿಕೊಳ್ಳಬೇಕು. ಸುಳ್ಳು ನೋಂದಣಿಗಳು ಕಂಡು ಬಂದಲ್ಲಿ ಇಲಾಖೆಯ ಗಮನಕ್ಕೆ ತರಬೇಕೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ ಮಾತನಾಡಿ, ಇಂದಿನ ಕಾರ್ಯಾಗಾರದಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ಕಾರ್ಮಿಕ ಇಲಾಖೆ ಸೇರಿದಂತೆ ಸರ್ಕಾರದಿಂದ ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳು, ಕಾನೂನುಗಳ ಕುರಿತು ಸವಿವರವಾಗಿ ಮಾಹಿತಿ ನೀಡಲಿದ್ದಾರೆ. ಎಲ್ಲ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ 1ನೇ ವೃತದ ಕಾರ್ಮಿಕ ನಿರೀಕ್ಷಕ ಎಂ.ಕೃಷ್ಣ, ಪಿಪಿಟಿ ಪ್ರದರ್ಶನ ಮೂಲಕ ಮಾಹಿತಿ ನೀಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯನ್ನು ಮಾಡಿಕೊಳ್ಳಲು 18 ರಿಂದ 60 ವರ್ಷದೊ¼ಗಿನ ವಯೋಮಿತಿಯನ್ನು ಹೊಂದಿರಬೇಕು. ನೋಂದಣಿ ಪೂರ್ವದ 12 ತಿಂಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕನಿಷ್ಠ 90 ದಿನಗಳು ಕೆಲಸವನ್ನು ಮಾಡಿರಬೇಕು. ಉದ್ಯೋಗ ದೃಢೀಕರಣ ಪತ್ರ, ಅರ್ಜಿದಾರ ಹಾಗೂ ಅವಲಂಬಿತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಅರ್ಜಿದಾರರ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ದೂರವಾಣಿ ಸಂಖ್ಯೆಯೊಂದಿಗೆ ಹಿರಿಯ ಕಾರ್ಮಿಕ ನಿರೀಕ್ಷಕರು ಅಥಾವ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಣಿಯನ್ನು ಮಾಡಿಸಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಶಿವಮೊಗ್ಗ ಕಾರ್ಮಿಕ ಇಲಾಖೆ, ಕಾರ್ಮಿಕ ನಿರೀಕ್ಷಕರು ಹಾಗೂ ಸಹಾಯವಾಣಿ 155214 ಸಂಪರ್ಕಿಸಬಹುದು ಎಂದು ತಿಳಿಸಿದರು.

ಹಾಗೂ ಬಾಲ ಕಾರ್ಮಿಕ ಕಾಯ್ದೆ ಸೇರಿದಂತೆ ಕಾರ್ಮಿಕರಿಗೆ ದೊರೆಯುವ ಸೌಲಭ್ಯ ಮತ್ತು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.

ಇಎಸ್‌ಐ ಆಸ್ಪತ್ರೆಯ ಡಾ.ಸಂಜನಾ ಕಾರ್ಮಿಕರಿಗೆ ಇಎಸ್‌ಐ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳು, ಸೌಲಭ್ಯಗಳು, ಕಾನೂನುಗಳ ಮಾಹಿತಿ ಒದಗಿಸುವ ಮಾಹಿತಿ ಕಣಜ ಮಳಿಗೆಯನ್ನು ಉದ್ಘಾಟಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಘುನಾಥ ನಿರೂಪಿಸಿದರು.

1ನೇ ವೃತ್ತದ ಕಾರ್ಮಿಕ ನಿರೀಕ್ಷಕಿ ಸುಪ್ರಿತ ಜೆ.ವಿ, ಶಿಕಾರಿಪುರ ವೃತ್ತದ ಕಾರ್ಮಿಕ ನಿರೀಕ್ಷಕ ಫಕೀರಪ್ಪ ಗೋಡಿ, ಭದ್ರಾವತಿ 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಕ್ಷಿತ್ ಬಿ.ಎಂ, ಸಾಗರ ವೃತ್ತದ ಕಾರ್ಮಿಕ ನಿರೀಕ್ಷಕಿ ಶಿಲ್ಪ.ಬಿ, ಕಾರ್ಮಿಕ ಸಂಘದ, ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಅಸಂಘಟಿತ ಕಾರ್ಮಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...