Friday, November 22, 2024
Friday, November 22, 2024

Madhu Bangarappa ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಹಳೆ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ

Date:

Madhu Bangarappa ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಭವನದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಅಡಿಯಲ್ಲಿ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಅಭಿವೃದ್ಧಿಹೊಂದಿದ ಸರ್ಕಾರಿ ಶಾಲೆಗಳ ವಿಡಿಯೋವನ್ನು ರಾಜ್ಯದಲ್ಲಿ ಹಳೇ ವಿದ್ಯಾರ್ಥಿಗಳಿಂದ ರಚಿತವಾಗಿರುವ ಸುಮಾರು 33 ಸಾವಿರ ವಾಟ್ಸಪ್ ಗ್ರೂಪ್ ಗಳಿಗೆ ಶೇರ್ ಮಾಡಿದರು.

♦️ರಾಷ್ಟ್ರಕವಿ ಶ್ರೀ ಡಾ. ಜಿ.ಎಸ್ ಶಿವರುದ್ರಪ್ಪ ಅವರು ವಿದ್ಯಾಭ್ಯಾಸ ಮಾಡಿದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರೌಢಶಾಲೆ, ಪಡುವಣಗೆರೆ.

♦️ಚಿಕ್ಕಮಗಳೂರು ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಯಲಗುಡಿಗೆ.

“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಒಂದು ಉತ್ತಮ ಯೋಜನೆಯಾಗಿದ್ದು ತಾವು ಕಲಿತ ಶಾಲೆಗೆ ತಮ್ಮ ಕೈಲಾದ ಕೊಡುಗೆ ನೀಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸುವುದಾಗಿದೆ. ಈ ಯೋಜನೆಯಿಂದಾಗಿ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ಸಹಕಾರವಾಗುತ್ತಿದೆ.

Madhu Bangarappa ಸರ್ಕಾರದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು, ಸಾಮಾಜಿಕ ಕಳಕಳಿ ಹೊಂದಿರುವವರು ಹಾಗೂ ದಾನಿಗಳ ಸಹಕಾರದಿಂದ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ಈ ಕಾರ್ಯಗಳು ಎಲ್ಲರಲ್ಲೂ ಪ್ರೇರಣೆಯಾದರೆ ನಮ್ಮ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು. ಈ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ರಮೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kateel Ashok Pai College ಕನ್ನಡ ಕೇವಲ ಭಾಷೆಯಲ್ಲ.ಅದು ಈ ನೆಲದ ಸಂಸ್ಕೃತಿ- ಡಾ.ಸೊನಲೆ ಶ್ರೀನಿವಾಸ್

Kateel Ashok Pai College 2024ರ ನವೆಂಬರ್ 21ರಂದು ಶಿವಮೊಗ್ಗದ ಕಟೀಲ್...

CM Siddhramaiah ನಬಾರ್ಡ್ ಸಾಲ ಮಿತಿ ಹೆಚ್ಚಿಸಲು ಕೇಂದ್ರ ಅರ್ಥಸಚಿವರನ್ನ ಭೇಟಿ ಮಾಡಿದ ಸೀಎಂ ಸಿದ್ಧರಾಮಯ್ಯ

CM Siddhramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌...

B.Y.Vijayendra ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯಕ್ಕೆಕೇಂದ್ರದಿಂದ ಶೇ.92.50 ರಷ್ಟು ಸಹಾಯ- ಬಿ.ವೈ.ವಿಜಯೇಂದ್ರ

B.Y.Vijayendra ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಶ್ರೀ ನರೇಂದ್ರ ಮೋದಿ...

Kannada Sahitya Sammelana ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜನಪದ ಚೇತನ “ಗೊರುಚ” ಆಯ್ಕೆ

Kannada Sahitya Sammelana ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ...