B. S. Yediyurappa ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾಯುಕ್ತ ಎದುರು ಹಾಜರಾಗಿದ್ದು, ಅಧಿಕಾರಿಗಳು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ ಕುಮಾರಸ್ವಾಮಿ ಮತ್ತು ಬಿ.ಎಸ್ ಯಡಿಯೂರಪ್ಪ ಅವರು ಗಂಗಾನಗರದ ಬಳಿಯ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ, ಕುಮಾರಸ್ವಾಮಿಯವರ ಬಾಮೈದನ ಹೆಸರಿಗೆ ನೋಂದಣಿ ಮಾಡಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭಿಸಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯನ್ನು ಯಡಿಯೂರಪ್ಪ ಅವಧಿಯಲ್ಲಿ ಮುಕ್ತಾಯಗೊಳಿಸಲಾಗಿತ್ತು ಎಂಬ ಆರೋಪವಿದೆ.
B. S. Yediyurappa ಪ್ರಕರಣದಲ್ಲಿ ಯಡಿಯೂರಪ್ಪ ಅವರು ಎ 1 ಆಗಿದ್ದು, ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಇಂದು (ಸೆ.21) ಬೆಳಿಗ್ಗೆ ಸಮನ್ಸ್ ನೀಡಿದ್ದರು. ಮಧ್ಯಾಹ್ನವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.