Supreme Court ಸುಪ್ರಿಂಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮದ್ರಾಸ್ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್‌ಗಳಿಗೆ ಎಂಟು ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಕೊಲಿಜಿಯಂ ತನ್ನ ಜುಲೈ 11 ರ ಶಿಫಾರಸುಗಳಲ್ಲಿ ಕೆಲವು ತಿದ್ದುಪಡಿ ಮಾಡಿದ ನಂತರ ನೇಮಕಾತಿಗಳು ನಡೆದಿವೆ.
ತನ್ನ ಕೊಲಿಜಿಯಂ ವ್ಯವಸ್ಥೆಯು “ಶೋಧನಾ ಸಮಿತಿ” ಅಲ್ಲ ಎಂದು ಸುಪ್ರಿಂಕೋರ್ಟ್ ಪೀಠವು ಹೇಳಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿವೆ. ನ್ಯಾಯಮೂರ್ತಿಗಳ ನೇಮಕಾತಿಗಾಗಿ ಪುನ: ಶಿಪಾರಸು ಮಾಡಲಾದ, ಆದರೆ ಇನ್ನೂ ಕೇಂದ್ರವು ಅದಕ್ಕೆ ಅನುಮತಿ ನೀಡದ ಹೆಸರುಗಳ ಸ್ಥಿತಿಯ ಕುರಿತು ವರದಿಯನ್ನು ಸಲ್ಲಿಸುವಂತೆ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರನ್ನು ಕೇಳಿತ್ತು.
ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಅವರು ‘ಎಕ್ಸ್’ ಮೂಲಕ ಹೊಸ ನೇಮಕಾತಿಗಳನ್ನು ಪ್ರಕಟಿಸಿದ್ದಾರೆ. “ಭಾರತದ ಸಂವಿಧಾನವು ನೀಡಿರುವ ಅಧಿಕಾರಗಳ ಅನುಷ್ಠಾನದಲ್ಲಿ, ರಾಷ್ಟ್ರಪತಿಗಳು 8 ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲು ಹಾಗೂ ವರ್ಗಾವಣೆ ಮಾಡಿದ್ದಾರೆ” ಎಂದು ಅವರು ಬರೆದಿದ್ದಾರೆ.
Supreme Court ವಿವಿಧ ರಾಜ್ಯ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ನ್ಯಾಯಾಧೀಶರು ಈ ಕೆಳಗಿನಂತಿದ್ದಾರೆ:
ನ್ಯಾಯಮೂರ್ತಿ ಮನಮೋಹನ್ (ಪ್ರಸ್ತುತ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ) – ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ರಾಜೀವ್ ಶಕ್ಧರ್ (ಪ್ರಸ್ತುತ ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರು) – ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ (ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರು) – ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ಇಂದ್ರ ಪ್ರಸನ್ನ ಮುಖರ್ಜಿ (ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರು) – ಮೇಘಾಲಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ನಿತಿನ್ ಮಧುಕರ್ ಜಮ್ದಾರ್ (ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರು) – ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ತಾಶಿ ರಬ್ಸ್ತಾನ್ (ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ನ್ಯಾಯಾಧೀಶರು) – ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ಕೆ.ಆರ್. ಶ್ರೀರಾಮ್ (ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರು) – ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರ ರಾವ್ (ಪ್ರಸ್ತುತ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ) – ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ
ಹೆಚ್ಚುವರಿಯಾಗಿ, ಮೂರು ನ್ಯಾಯಾಂಗ ಅಧಿಕಾರಿಗಳನ್ನು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಆರ್.ಪೂರ್ಣಿಮಾ, ಎಂ.ಜೋತಿರಾಮನ್ ಮತ್ತು ಡಾ.ಅಗಸ್ಟಿನ್ ದೇವದಾಸ್ ಮರಿಯಾ ಕ್ಲೀಟ್ ಅವರು ಈ ಪಟ್ಟಿಯಲ್ಲಿ ಇದ್ದಾರೆ.