Kuvempu University ಅಮೇರಿಕದ ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. ೦೨ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಪ್ರೊ. ಬಿ. ಜೆ. ಗಿರೀಶ್ ಮತ್ತು ಪ್ರೊ. ಬಿ. ಇ. ಕುಮಾರಸ್ವಾಮಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.
ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜಾನ್ ಐಒನ್ನಿಡಿಸ್ ಸೆಪ್ಟೆಂಬರ್ ೧೬ರಂದು ಬಿಡುಗಡೆ ಮಾಡಿರುವ ವಿಶ್ವದ ಅಗ್ರ ಶೇ. ೦೨ರ ಶ್ರೇಷ್ಠ ವಿಜ್ಞಾನಿಗಳ ಡೇಟಾಬೇಸ್‌ನಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದು, ವಿವರಗಳು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.
Kuvempu University 2024ನೇ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 46,890ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳನ್ನು ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ತಮ್ಮ ಸಂಶೋಧನಾ ಒಟ್ಟು ಕಾಲಾವಧಿಯಲ್ಲಿ 1,46,024 ಅಂಕಗಳೊಂದಿಗೆ ಸತತ ಆರನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ.
ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಕುಮಾರಸ್ವಾಮಿ ಈ ವರ್ಷ 1,69,851ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ.
Kuvempu University ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಈರ್ವರು ಪ್ರಾಧ್ಯಾಪಕರ ಹೆಸರು ಸೇರ್ಪಡೆ
Date: