Monday, May 4, 2026
Monday, May 4, 2026

V. Somanna ಸೆ.26 ರಂದು ಶಿವಮೊಗ್ಗಕ್ಕೆ ರೈಲ್ವೆ ಸಚಿವ ವಿ.ಸೋಮಣ್ಣ ಭೇಟಿ

Date:

V. Somanna ಕೇಂದ್ರ ರೈಲ್ವೆ ಮಂತ್ರಿ ವಿ ಸೋಮಣ್ಣ ಇದೇ ಸೆಪ್ಟೆಂಬರ್‌ 26 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ಟ್ರೈನ್‌ ಒದಗಿಸುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.
ಈಗಾಗಲೇ ಸಂಸದರು ಶಿವಮೊಗ್ಗಕ್ಕೆ ವಂದೇ ಭಾರತ್ ಟ್ರೈನ್‌ ಬರಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದರು. ಸಚಿವ ಸೋಮಣ್ಣ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದು, ತಮ್ಮ ಭೇಟಿ ವೇಳೆ ಈ ಬಗ್ಗೆ ಅವರು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸೆ. 26 ರಂದು ಜಿಲ್ಲೆಗೆ ಬರಲಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ- ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ.
V. Somanna ನಂತರ ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್ ಡಿಪೊ ಕಾಮಗಾರಿ ವೀಕ್ಷಿಸಲಿದ್ದಾರೆ.
ಮಧ್ಯಾಹ್ನ 12ರಿಂದ 1ರ ವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಶಿವಮೊಗ್ಗದಿಂದ ಬೀರೂರಿಗೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...