Thursday, March 19, 2026
Thursday, March 19, 2026

Samanvaya Trust ಸಮನ್ವಯ ಟ್ರಸ್ಟ್ ನಿಂದ ವೈ.ಎಸ್.ಭುವನೇಶ್ವರಿ ಅವರಿಗೆ ಪರಿಸರ ಕುಟುಂಬ ಪ್ರಶಸ್ತಿ

Date:

Samanvaya Trust ಪರಿಸರದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ನಗರದ ಚನ್ನಪ್ಪ ಲೇಔಟ್‌ನ ನಿವಾಸಿ, ಪರಿಸರ ಸ್ನೇಹಿ ಮೆಸ್‌ನ ವೈ.ಎಸ್.ಭುವನೇಶ್ವರಿ ಅವರ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮನ್ವಯ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡಿ ಗೌರವಿಸುವ ಕೆಲಸವನ್ನು ಟ್ರಸ್ಟ್ ನಿರಂತರವಾಗಿ ಮಾಡುತ್ತಿದ್ದು, ಈ ಬಾರಿ ಚನ್ನಪ್ಪ ಲೇಔಟ್‌ನ ಭುವನೇಶ್ವರಿ ಅವರ ಕುಟಂಬಕ್ಕೆ ಪ್ರಶಸ್ತಿ ವಿತರಿಸಲಾಯಿತು.
Samanvaya Trust ವೈ.ಎಸ್.ಭುವನೇಶ್ವರಿ ಅವರು ವಿಶೇಷವಾಗಿ ಪರಿಸರದ ಕಾಳಜಿ ಹೊಂದಿದ್ದು, ಪರಿಸರ ಸಂರಕ್ಷಣೆಯ ಕಾಯಕದಲ್ಲಿ ನಿರತರಾಗಿದ್ದಾರೆ. ಪರಿಸರ ದಿನಾಚರಣೆಯಂದು ನೂರಾರು ಸಸಿಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಾರೆ. ಸಮಾಜಮುಖಿ ಸೇವೆಗಳಲ್ಲಿಯೂ ಕೆಲಸ ಮಾಡುತ್ತಿರುವ ಭುವನೇಶ್ವರಿ ಅವರ ಸೇವೆ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ.
ಸಮನ್ವಯ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆ ಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ.
ಉದ್ಯಮಿ ಎಸ್.ಎಂ.ಬಾಲಕೃಷ್ಣ ಅವರು ಪರಿಸರ ಕುಟುಂಬ ಪ್ರಶಸ್ತಿಯನ್ನು ವೈ.ಎಸ್.ಭುವನೇಶ್ವರಿ ಅವರಿಗೆ ನೀಡಿದರು. ಸಮನ್ವಯ ಕಾಶಿ, ಸಮನ್ವಯ ಸಲಹಾ ಸಮಿತಿ ಸದಸ್ಯ ಯತೀಶ್, ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...