Mangalore University ಕಲ್ಲಡ್ಕ ಪ್ರಭಾಕರ್ ಭಟ್ ಅವರು ಅಧ್ಯಕ್ಷರಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿಗೆ ಸರ್ಕಾರದ ಪೂರ್ವಾನುಮತಿಯಿಲ್ಲದೆಯೇ ಸ್ವಾಯತ್ತ ಸ್ಥಾನಮಾನ ನೀಡಿತ್ತು. ಹಾಗೆಯೇ ಈ ಸ್ವಾಯತ್ತ ಸ್ಥಾನಮಾನ ನೀಡುವ ಮುನ್ನ ರಾಜ್ಯ ಸರ್ಕಾರದ ಪೂರ್ವಾನುಮೋದನೆ ಪಡೆಯಬೇಕು ಎಂದು ಯುಜಿಸಿ ಸ್ಪಷ್ಟವಾಗಿ ಹೇಳಿದ್ದರೂ ಸಹ ಮಂಗಳೂರು ವಿಶ್ವವಿದ್ಯಾಲಯವು ಇದನ್ನು ಬದಿಗೊತ್ತಿತ್ತು.
ಸರ್ಕಾರದ ಪೂರ್ವಾನುಮತಿಯಿಲ್ಲದೆಯೇ ಸ್ವಾಯತ್ತ ಸ್ಥಾನಮಾನ ನೀಡಿದ್ದ ಮಂಗಳೂರು ವಿಶ್ವವಿದ್ಯಾಲಯಕ್ಕೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ಕುಲಸಚಿವರಿಗೆ ಕಾರಣ ಕೇಳುವ ನೋಟೀಸ್ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 1915ರಲ್ಲೇ ಪ್ರಾರಂಭವಾಗಿರುವ ವಿವೇಕಾನಂದ ವಿದ್ಯಾರ್ವಧಕ ಸಂಘವು ಸ್ನಾತಕ, ಸ್ನಾತಕೋತ್ತರ ಸೇರಿದಂತೆ ವಿವಿಧ ತರಗತಿಗಳನ್ನು ನಡೆಸುತ್ತಿದೆ.
ಈ ಪೈಕಿ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಕೂಡ ಒಂದು. ಈ ಕಾಲೇಜಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಂಗಳೂರು ವಿಶ್ವವಿದ್ಯಾಲಯವು 2022-23ರಿಂದ 2031-32ರವರೆಗೆ ಸ್ವಾಯತ್ತ ಸ್ಥಾನಮಾನ ನೀಡಿತ್ತು. ಈ ಸಂಬಂಧ 2022ರ ಆಗಸ್ಟ್ 10ರಂದು ಮಂಗಳೂರು ವಿಶ್ವವಿದ್ಯಾಲಯವು ಕಾಲೇಜಿನ ಪ್ರಾಂಶುಪಾಲರಿಗೆ ಪತ್ರವನ್ನೂ ಬರೆದಿತ್ತು.
Mangalore University ಈ ಪತ್ರದ ಪ್ರತಿಯೂ ‘ದಿ ಫೈಲ್’ಗೆ ಲಭ್ಯವಾಗಿದೆ.
ಈ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ನೀಡುವ ಸಂಬಂಧ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯದ ಅಧಿನಿಯಮ 2000ರ ಪ್ರಕರಣ 64 ಅನ್ವಯ ಸರ್ಕಾರದ ಪೂರ್ವಾನುಮತಿ ಪಡೆಯುವುದು ಅವಶ್ಯಕ. ಆದರೆ ಮಂಗಳೂರು ವಿಶ್ವವಿದ್ಯಾಯವು ಸರ್ಕಾರದ ಪೂರ್ವಾನುಮತಿ ಪಡೆಯದೇ ಸ್ವಾಯತ್ತ ಸ್ಥಾನಮಾನ ನೀಡಿತ್ತು. ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000 ಪ್ರಕರಣ 64ರ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ಉನ್ನತ ಶಿಕ್ಷಣ ಇಲಾಖೆಯು ಕಾರಣ ಕೇಳುವ ನೋಟೀಸ್ ನೀಡಿದೆ.
ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಿಗೆ 2024ರ ಸೆ.30ರಂದು ಕಾರಣ ಕೇಳುವ ನೀಡಿದೆ.