Tuesday, March 24, 2026
Tuesday, March 24, 2026

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ. ಅವರಿಗೆ ನಮ್ಮನೈತಿಕ ಬೆಂಬಲ ಸೂಚಿಸಿ ಅ.03 ರಂದು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ ಜನಜಾಥಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು.

ಪ್ರೆಸ್ ಟ್ರಸ್ಟ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರ ಮೇಲೆ ಕಳಂಕ ಹೊರಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆದರಿಂದ ಅವರು ಹೊರ ಬರುತ್ತಾರೆ. ಅಹಿಂದ ನಾಯಕರ ರಾಜಕೀಯ ಭವಿಷ್ಯದ ಅಸ್ತಿತ್ವಕ್ಕಾಗಿ, ಸಿದ್ದರಾಮಯ್ಯ ಅವರ ನಾಯಕತ್ವದ ಉಳಿವಿಗಾಗಿ, ಅವರ ಬೆಂಬಲಕ್ಕಾಗಿ ಅ. 03ರಂದು ಹುಬ್ಬಳ್ಳಿಯಿಂದ ಜಾಥಾ ಹೊರಡಲಿದೆ. ವಾಹನಗಳಲ್ಲಿ ಜಾಥಾ ಸಾಗಲಿದೆ. ಅಲ್ಲಲ್ಲಿ ಕಾಲ್ನಡಿಗೆಯ ಮೂಲಕವೂ ಜಾಥಾ ಮುಂದುವರೆಯುತ್ತದೆ ಎಂದು ಹೇಳಿದರು.

15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇದರಲ್ಲಿ ಭಾಗವಹಿಸುವರು. ಶಿವಮೊಗ್ಗ ಜಿಲ್ಲೆಯಿಂದಲೂ ಕೂಡ ಸುಮಾರು 1 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಅ. 4 ರಂದು ಈ ಜಾಥಾ ಬೆಂಗಳೂರು ತಲುಪಲಿದ್ದು, ಬೆಂಗಳೂ ರಿನ ವಿಧಾನಸೌಧದ ಮುಂಭಾಗದ ಗಾಂಧಿಪ್ರತಿಮೆ ಬಳಿ ಬೃಹತ್ ಸಭೆ ನಡೆಯಲಿದೆ ಎಂದರು.

CM Siddharamaih ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಹನುಮಂತಪ್ಪ ಬಂಡಿವಡ್ಡರ್, ವಿನಯಕುಮಾರ್ ಕೆ.ಎನ್., ರೇಷ್ಮಾ ಬಾನು, ಶೋಭಾ, ಸೈಯದ್ ನಾಸಿರ್, ಭಾಗ್ಯ, ಹನುಮಂತಪ್ಪ.ಸಿ. ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...