Monday, February 2, 2026
Monday, February 2, 2026

Shivamogga Police ಬಸ್ ಹತ್ತುವಾಗ ಮಹಿಳೆಯ ಆಭರಣ ಕಳವು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Date:

Shivamogga Police ಶಿವಮೊಗ್ಗ ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಲಾಗಿದೆ.

ತಾಲೂಕಿನ ರಾಮೇನಕೊಪ್ಪದಲ್ಲಿರುವ ತವರು ಮನೆಗೆ ಬಂದಿದ್ದ 28 ವರ್ಷದ ಮಹಿಳೆ ಗಂಡನ ಮನೆಯಾದ ಶಿಕಾರಿಪುರದ ನೆಲವಾಗಿಲು ಗ್ರಾಮಕ್ಕೆ ವಾಪಾಸ್ ಆಗಲು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಧರ್ಮಸ್ಥಳ-ಹುಬ್ಬಳ್ಳಿ KSRTC ಬಸ್ ಹತ್ತಿದ್ದಾರೆ. ಎಂದಿನಂತೆ ಬಸ್ ಹತ್ತಲು ರಶ್ ಆಗಿದೆ.

Shivamogga Police ರಶ್ ನಲ್ಲೇ ಸೀಟು ಹಿಡಿಯಲು ಮುಂದಾದ ಮಹಿಳೆಯು ಸೀಟು ಹಿಡಿದ ನಂತರ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಆಧಾರ್ ಕಾರ್ಡ್ ತೆಗೆಯಲು ಬ್ಯಾಗ್ ನೋಡಿಕೊಂಡಿದ್ದಾರೆ. ವ್ಯಾನಿಟಿ ಬ್ಯಾಗ್ ನ ಜಿಪ್ ಅರ್ಧ ತೆಗೆದಿರುವುದು ಗಮನಕ್ಕೆ ಬಂದಿದೆ. ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಮತ್ತು ಹಲವು ಕಾರ್ಡ್ ಗಳು ಕಾಣೆಯಾಗಿವೆ.

20 ಸಾವಿರದ ಕರಿಮಣಿ ಮತ್ತು ತಾಳಿಗುಂಡು ಇರುವ ತಾಳಿ ಸರ, ಈಶ್ವರನ ಡಾಲರ್, ಕೆನೆರಾ ಮತ್ತು ಇಂಡಿಯನ್ ಬ್ಯಾಂಕ್‌ನ ಎಟಿಎಂ ಕಾರ್ಡ್, ಕೆಎಂವೈ ಕಾರ್ಡ್, ಪಾನ್ ಕಾರ್ಡ್ ಕಳುವಾಗಿದೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...