Saturday, December 6, 2025
Saturday, December 6, 2025

Rotary Club Shivamogga ಸಸಿ ನೆಡುವ ಜೊತೆ ಪೋಷಣೆಯ ಸಂಕಲ್ಪ ಮಾಡಬೇಕು- ಸಿ.ಎ.ದೇವ್ ಆನಂದ್

Date:

Rotary Club Shivamogga ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಹಾಗೂ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಸಸಿಗಳ ನೆಡುವುದ ಜತೆಯಲ್ಲಿ ಪೋಷಣೆ ಮಾಡುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ಕಾಲೇಜಿನ ಉದ್ಯಾನದಲ್ಲಿರುವ ಗಿಡ ಮರಗಳ ಪೋಷಣೆಗೆ 500 ಕೆಜಿ ಸಾವಯವ ಗೊಬ್ಬರವನ್ನು ರೋಟರಿ ಮಲೆನಾಡು ಕ್ಲಬ್ ಅಧ್ಯಕ್ಷ ಮುಸ್ತಾಕ್ ಅಲಿಶಾ ವಿತರಿಸಿದರು. ಕಾಲೇಜಿನ ಸ್ನೇಹಿತರ ಬಳಗದ ಸಹಕಾರದಿಂದ ಕಾಲೇಜಿಗೆ ಆಲ್ ಇನ್ ಒನ್ ಕಂಪ್ಯೂಟರ್ ಕೊಡುಗೆಯಾಗಿ ನೀಡಿದರು.
Rotary Club Shivamogga ಕ್ಲಬ್ ಅಧ್ಯಕ್ಷ ಮುಸ್ತಾಕ್ ಮಾತನಾಡಿ, ಕ್ಲಬ್‌ನಿಂದ ಈಗಾಗಲೇ ಸಾಮಾಜಿಕ ಜಾಲತಾಣದ ಮೂಲಕ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುತ್ತಿದೆ. ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯೆ ಡಾ. ಎನ್. ರಾಜೇಶ್ವರಿ ಮಾತನಾಡಿ, ರೋಟರಿಯಂತಹ ಸಂಸ್ಥೆಗಳು ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಬಹಳ ಅನುಕೂಲಕರವಾಗಿದೆ ಎಂದು ತಿಳಿಸಿದರು.
ಮನೋವೈದ್ಯ ಡಾ. ಆಫ್ತಾಬ್ ಮಾಲ್ದರ್ ತರಗತಿ ನಿರ್ವಹಣೆ ಹಾಗೂ ಕೆಲಸದೊತ್ತಡದ ನಿರ್ವಹಣೆ ಕುರಿತು ಸಿಬ್ಬಂದಿಗೆ ಉಪಯುಕ್ತ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಜಯನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸಿದ್ದೇಗೌಡ ಮಾತನಾಡಿ, ನಮ್ಮ ಪ್ರಾಣ ರಕ್ಷಣೆಗಾಗಿ ರಸ್ತೆ ನಿಯಮಗಳನ್ನು ಪಾಲಿಸುವುದು ಅನಿವಾರ್ಯ. ಬಹುತೇಕ ಅಪಘಾತಗಳು ಚಾಲಕರ ನಿರ್ಲಕ್ಷತೆಯಿಂದ ನಡೆಯುತ್ತಿವೆ ಎಂದರು. ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಶ್ರೀನಿವಾಸ್ ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಟ್ರಾಫಿಕ್ ನಿಯಮಗಳು, ಅದರ ಉಲ್ಲಂಘನೆಯ ಪರಿಣಾಮಗಳು, ಉಲ್ಲಂಘನೆಗೆ ಇರುವ ದಂಡ ಶುಲ್ಕಗಳ ಮಾಹಿತಿಯನ್ನು ತಿಳಿಸಿದರು. ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಸ್ಮಾರ್ಟ್ ಸಿಟಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆಯಿಂದ ಕಾರ್ಯರೂಪಕ್ಕೆ ತಂದಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕ್ಲಬ್ ಪೋಲಿಯೋ ಪ್ಲಸ್ ವಿಭಾಗ ಚೇರ್ಮನ್ ಡಾ. ಶ್ರೀನಿವಾಸ್ ಮಾತನಾಡಿ, ತಂಬಾಕು ಉತ್ಪನ್ನಗಳ ವ್ಯಸನ ಹಾಗೂ ಅದರ ದುಷ್ಟರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ರೋಟರಿ ವಲಯ 10ರ ಸಹಾಯಕ ಗವರ್ನರ್ ಎಸ್.ಆರ್.ನಾಗರಾಜ, ಸಿ.ಎ.ರೇಖಾ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಗವರ್ನರ್ ಅವರ ಉಪಸ್ಥಿತಿಯಲ್ಲಿ ರೋಟರಿ ಮಿಡ್ ಟೌನ್ ಸಭಾಂಗಣದಲ್ಲಿ ಸಾರ್ವಜನಿಕ ಸಮಾರಂಭ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...