Wednesday, February 4, 2026
Wednesday, February 4, 2026

CM Siddharamaiah ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Date:

CM Siddharamaiah ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಮತ್ತು ಶಾಸಕರು ಇಂದು ಶಕ್ತಿ ಪೀಠದ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಸವದತ್ತಿಯ ಯಲ್ಲಮ್ಮ ಗುಡ್ಡಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ವಾದ್ಯ ಮೇಳಗಳೊಂದಿಗೆ ಸ್ವಾಗತಿಸಲಾಯಿತು. ಮಂತ್ರ ಘೋಷಗಳೊಂದಿಗೆ ದೇವಿ ದರ್ಶನಕ್ಕೆ ಅರ್ಚಕರು ಆಹ್ವಾನಿಸಿದರು. ಇದೇ ವೇಳೆ ದೇವಸ್ಥಾನದ ಅರ್ಚಕ ಕೊಟ್ಟ ಎರಡು ಲಿಂಬೆಹಣ್ಣುಗಳನ್ನು ಕೈಯಲ್ಲಿ ಹಿಡಿದುಕೊಂಡು ದೇವಸ್ಥಾನ ಪ್ರವೇಶಿಸಿದ ಸಿದ್ದರಾಮಯ್ಯ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ: ಪತ್ನಿ ಹೆಸರಲ್ಲಿ ಸಿಎಂ ಪೂಜೆ :

CM Siddharamaiah ಪತ್ನಿ ಪಾರ್ವತಿ ಹೆಸರಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅರ್ಚಕರು ಅವರ ಹೆಸರಲ್ಲಿ ಪೂಜೆ ಸಲ್ಲಿಸಿ, ಮಂಗಳಾರತಿ ನೀಡಿ, ನಾಗಮೂರ್ತಿ ದೇವಿಯ ಬೆಳ್ಳಿ ಕಿರೀಟವನ್ನು ಸಿದ್ದರಾಮಯ್ಯ ಅವರ ತಲೆಗೆ ಮುಟ್ಟಿಸಿ ಆಶೀರ್ವಾದ ಮಾಡಿದರು. ದೇವಿಯ ಆರತಿ ಆಗುವವರೆಗೂ ದೇವಿ ಸನ್ನಿಧಾನದಲ್ಲಿ ನಿಂತು ದರ್ಶನ ಪಡೆದ ಸಿಎಂ, ತಾವೇ ಕುಂಕುಮ ಹಚ್ಚಿಕೊಂಡರು‌. ಬಳಿಕ ಆರತಿ ತಟ್ಟೆಗೆ 500 ರೂ. ಹಾಕಿದರು.ದೇವಿ ಮುಂದೆ 10 ನಿಮಿಷ ಕುಳಿತು ಡಿಸಿಎಂ ಡಿ.ಕೆ. ಶಿವಕುಮಾರ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಹೊರಗೆ ಡಿಕೆಶಿ ಬರೋವರೆಗೆ ಸಿಎಂ ಸಿದ್ದರಾಮಯ್ಯ ಕಾದು ನಿಂತಿದ್ದರು. ಈ ವೇಳೆ ಸಚಿವರಾದ ಹೆಚ್.ಕೆ. ಪಾಟೀಲ, ರಾಮಲಿಂಗಾರೆಡ್ಡಿ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಭರಮಗೌಡ ಕಾಗೆ, ಆಸೀಫ್ ಸೇಠ್, ಎನ್.ಹೆಚ್. ಕೋನರೆಡ್ಡಿ, ಚನ್ನರಾಜ ಹಟ್ಟಿಹೊಳಿ ಸೇರಿ ಮತ್ತಿತರರು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ಕೊಟ್ಟರು.ದೇವಿ ದರ್ಶನ ಪಡೆದು ವಾಪಸ್ ಆಗುವಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಸವದತ್ತಿ ಯಲ್ಲಮ್ಮ ದೇವಿಯ ಅರ್ಚಕರು ರಾಜ್ಯದಲ್ಲಿರುವ ಅರ್ಚಕರ ವೇತನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು. ಸಂಬಂಧಿಸಿದ ‌ಸಚಿವರೊಂದಿಗೆ ಚರ್ಚಿಸಿ ವೇತನ ಬಿಡುಗಡೆ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು. ದೇವಸ್ಥಾನದಿಂದ ಹೊರ ಬಂದ ಸಿದ್ದರಾಮಯ್ಯ ಜನರತ್ತ ಕೈ ಬೀಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...