Monday, March 23, 2026
Monday, March 23, 2026

Actor Darshan ನಟ ದರ್ಶನ್​​ ಭೇಟಿಗಾಗಿ ಟೆಡ್ಡಿಬೇರ್​ ಧರಿಸಿ ಬಳ್ಳಾರಿ ಜೈಲಿಗೆ ಬಂದ ಅಭಿಮಾನಿ

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಳ್ಳಾರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್​​​​ ಅವರನ್ನು ನೋಡಲು ಅಭಿಮಾನಿಯೋರ್ವ ಟೆಡ್ಡಿ ಬೇರ್​ ಧರಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಆಗಮಿಸಿದ್ದಾನೆ.
ಬಳ್ಳಾರಿ ಕೇಂದ್ರ ಕಾರಾಗೃಹದೆದುರು ಇಂದು ಬೆಳಗ್ಗೆ ಅಭಿಮಾನಿ ಕಾರ್ತಿಕ್ ಎಂಬಾತ ಕಾಣಿಸಿಕೊಂಡಿದ್ದಾನೆ. ಟೆಡ್ಡಿಬೇರ್​ ಉಡುಪು ಧರಿಸಿ, We are waiting you D BOSS ಎಂಬ ಸಂದೇಶದ ಫಲಕ ಹಿಡಿದು ನಿಂತಿದ್ದ. ದರ್ಶನ್ ಆದಷ್ಟು ಬೇಗ ಜೈಲಿನಿಂದ ಹೊರಬರಲಿ ಎಂದು ಪ್ರಾರ್ಥಿಸುತ್ತಿರುವ ಈತ ಜೈಲು ಸಿಬ್ಬಂದಿಯನ್ನು ಮಾತನಾಡಿಸಿದ್ದಾನೆ. ಈ ವೇಳೆ ಆರೋಪಿಯ ಭೇಟಿಗೆ ಹೊರಗಿನವರಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Actor Darshan ಜೈಲಿಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ವಕೀಲರು ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಈಗಾಗಲೇ ಹಲವು ಬಾರಿ ಭೇಟಿ ನೀಡಿದ್ದಾರೆ. ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮತ್ತು ನಿರ್ಮಾಪಕಿ ಶೈಲಜಾ ನಾಗ್​ ಕೂಡಾ ಇತ್ತೀಚೆಗೆ ಆಗಮಿಸಿದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್​ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಪೂರ್ಣಗೊಂಡಿದ್ದು, ಅಂತಿಮ ಆದೇಶ ಸೋಮವಾರ ಹೊರಬೀಳಲಿದೆ. ಸರ್ಕಾರದ ಪರವಾಗಿ ಅಭಿಯೋಜಕ ಪ್ರಸನ್ನ‌ಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದಿಸಿದ್ದರು.

ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಆದೇಶ ಕೂಡಾ ಇದೇ ದಿನ ಹೊರಬರಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...