Friday, November 22, 2024
Friday, November 22, 2024

DC Shivamogga ಕಣ್ಣಿನ ದೋಷ ನಿವಾರಿಸುವ ‘ಅಂಧತ್ವ ಮುಕ್ತ ಶಿವಮೊಗ್ಗ 2024’ ಕಾರ್ಯಕ್ರಮ : ಡಿಸಿ

Date:

ಮಕ್ಕಳು ಮತ್ತು ದೊಡ್ಡವರಲ್ಲಿ ವಿವಿಧ ರೀತಿಯ ಕಣ್ಣಿನ ದೋಷಗಳನ್ನು ಸರಿಪಡಿಸುವ ಅಂಧತ್ವ ಮುಕ್ತ ಶಿವಮೊಗ್ಗ 2024 ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕೆ ಅಗತ್ಯವಾದ ಎಲ್ಲ ಪೂರ್ವಸಿದ್ದತೆ ಹಾಗೂ ಕ್ರಿಯಾಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
 ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಂಧತ್ವ ಮುಕ್ತ ಶಿವಮೊಗ್ಗ 2024 ಕಾರ್ಯಕ್ರಮದ ಕುರಿತು ಸಿದ್ದತೆ ನಡೆಸಲು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

DC Shivamogga ಜಿ.ಪಂ ಸಿಇಓ ರವರು ಅಂಧತ್ವ ಮುಕ್ತ ಶಿವಮೊಗ್ಗದಂತಹ ಉತ್ತಮ ಕಾರ್ಯಕ್ರಮದ ಮುಂದಾಳತ್ವ ವಹಿಸಿಕೊಂಡಿದ್ದು, ಈ ಕಾರ್ಯಕ್ರಮದ ಅನುಷ್ಟಾನಕ್ಕೆ ಎಲ್ಲರೂ ಸಹಕರಿಸಬೇಕು. ಅಂಧತ್ವಕ್ಕೆ ಕಾರಣವಾಗುವ ಅಂಶಗಳು, ಅದರ ನಿವಾರಣೆಗೆ ಅಗತ್ಯವಾದ ಚಿಕಿತ್ಸೆ, ಮಾನವ ಸಂಪನ್ಮೂಲ, ಮೂಲಭೂತ ಸೌಕರ್ಯಗಳು, ಹಣಕಾಸು ಹಾಗೂ ಕಾರ್ಯಕ್ರಮದ ರೂಪುರೇಷೆ ಕುರಿತು ಅಚ್ಚುಕಟ್ಟಾಗಿ ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ಎನ್.ಹೇಮಂತ್ ಮಾತನಾಡಿ, ಕೆಲವು ಜಿಲ್ಲೆಗಳಲ್ಲಿ ಆಶಾಕಿರಣ ಎಂಬ ಕಾರ್ಯಕ್ರಮದಡಿ ಅಂಧತ್ವ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಅಂಧತ್ವ ಮುಕ್ತ ಶಿವಮೊಗ್ಗ ಎಂಬ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಈ ಕಾರ್ಯಕ್ರಮದಡಿ ಮುಖ್ಯವಾಗಿ ಶಾಲಾ ಮಕ್ಕಳಲ್ಲಿ ಕಂಡು ಬರುವ ಕಣ್ಣಿನ ದೋಷಗಳು, ಕಣ್ಣಿನ ಪೊರೆ, ಒಡಚುಗಣ್ಣು, ಗ್ಲುಕೋಮಾ, ಡಯಾಬಿಟಿಕ್ ರೆಟಿನೋಪಥಿ ಮತ್ತು ಇತರೆ ಕಣ್ಣಿನ ದೋಷಗಳನ್ನು ಗುರುತಿಸಿ ಕನ್ನಡಕ ನೀಡುವುದು, ಕಣ್ಣಿನ ಪೊರೆ ಶಸ್ತçಚಿಕಿತ್ಸೆ ಹಾಗೂ ಹೆಚ್ಚಿನ ತೊಂದರೆ ಇದ್ದರೆ ಉನ್ನತ ಆರೋಗ್ಯ ಕೇಂದ್ರಗಳಿಗೆ ರೆಫರ್ ಮಾಡಲಾಗುವುದು.
ಕಾರ್ಯಕ್ರಮದ ರೂಪುರೇಷೆ : ಈ ಕಾರ್ಯಕ್ರಮದಡಿ ಪ್ರಾಥಮಿಕ ತಪಾಸಣೆ, ಮಾಧ್ಯಮಿಕ ತಪಾಸಣೆ ಮತ್ತು ಉನ್ನತ ಆರೋಗ್ಯ ಕೇಂದ್ರಕ್ಕೆ ರೆಫರ್ ಮಾಡುವ ಮೂರು ಹಂತಗಳಿವೆ. ಮೊದಲ ಹಂತದಲ್ಲಿ ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಕಣ್ಣಿನ ತೊಂದರೆ ಬಗ್ಗೆ ಪರಿಶೀಲಿಸಿ ವರದಿ ನೀಡುವರು. ನಂತರ ಆಶಾ ಬ್ಲಾಕ್‌ಗಳಲ್ಲಿ ವೈದ್ಯರು ತಪಾಸಣೆ ನಡೆಸಿ, ಕನ್ನಡಕ ಅಗತ್ಯವಿರುವವರಿಗೆ ಕನ್ನಡಕ ವಿತರಣೆ ಮಾಡುವರು. ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ಉನ್ನತ ಆರೋಗ್ಯ ಕೇಂದ್ರಕ್ಕೆ ರೆಫರ್ ಮಾಡಲಾಗುವುದು.
DC Shivamogga ಪ್ರಸ್ತುತ ನಿಯಮಿತವಾಗಿ ಸರ್ಕಾರಿ ಶಾಲೆಗಳಲ್ಲಿ ಆರ್‌ಬಿಎಸ್‌ಕೆ ಕಾರ್ಯಕ್ರಮದಡಿ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿರುವವರಿಗೆ ಕನ್ನಡಕ, ಇತರೆ ಚಿಕಿತ್ಸೆಗೆ ರೆಫರ್ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಕಿರಣ್ ಮಾತನಾಡಿ, 2024 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 15813 ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ನಡೆದಿದೆ. ಗ್ರಾಮೀಣ ಭಾಗ ಮತ್ತು ಮಹಿಳೆಯರಲ್ಲಿ ಕಣ್ಣಿನ ಸಮಸ್ಯೆಗಳು ಹೆಚ್ಚಿವೆ. ಈ ಕಾರ್ಯಕ್ರಮದಲ್ಲಿ ಕಣ್ಣಿನ ಪೊರೆ, ಗ್ಲುಕೊಮಾ, ಸಕ್ಕರೆ ಖಾಯಿಲೆ ರೆಟಿನೊಪತಿ, ಮಕ್ಕಳಲ್ಲಿ ಕಣ್ಣಿನ ತೊಂದರೆಗಳು, ಒಡಚುಗಣ್ಣು, ಗ್ಲುಕೊಮಾ, ಕಾನ್‌ಜೆನಿಟಲ್ ಟೋಸಿಸ್, ಇತರೆ ಕಣ್ಣಿನ ಸಮಸ್ಯೆಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಕಾರ್ಯಕ್ರಮಕ್ಕೆ ಅಗತ್ಯವಾದ ಮಾನವ ಸಂಪನ್ಮೂಲ ಮತ್ತು ಮೂಲಭೂತ ಸೌಕರ್ಯಗಳನ್ನು ಸಿಎಸ್‌ಆರ್, ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವ್ಯವಸ್ಥೆ ಮಾಡಿಕೊಳ್ಳಲು ಯೋಜನೆ ರೂಪಿಸಬೇಕು.
ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕೆ ಅಂಧತ್ವ ಮುಕ್ತ ಶಿವಮೊಗ್ಗ ಜಿಲ್ಲಾ ಸಮಿತಿ ರಚನೆ ಮಾಡಬೇಕು. ವೈದ್ಯರು, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ ಅಗತ್ಯವಾದ ತರಬೇತಿ ನೀಡಲು ಕ್ರಮ ವಹಿಸಬೇಕು ಎಂದರು.
ಎಲ್ಲ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಣ್ಣಿನ ತಜ್ಞರು ಕಣ್ಣಿನ ಪೊರೆ ಶಸ್ತçಚಿಕಿತ್ಸೆ ಮಾಡಲು ಕ್ರಮ ವಹಿಸಬೇಕು. ಜಿಲ್ಲಾ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಕಣ್ಣಿನ ಪೊರೆ ಶಸ್ತçಚಿಕಿತ್ಸೆಗಳು ನಡೆಯುವಂತಾಗಬೇಕು ಎಂದರು.
ಈ ಕಾರ್ಯಕ್ರಮ ಬಡವರು ಮತ್ತು ಮಧ್ಯಮವರ್ಗದವರಿಗೆ ಸಹಕಾರಿಯಾಗಲಿದ್ದು, ಎನ್‌ಜಿಓಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಡಿಹೆಚ್‌ಓ ಡಾ.ನಟರಾಜ್, ಮೆಗ್ಗಾನ್ ಬೋಧನಾ ಆಸ್ಪತ್ರೆಯ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಐಎಂಎ ಅಧ್ಯಕ್ಷ ಡಾ.ಶ್ರೀಧರ್, ತಾಲ್ಲೂಕು ವೈದ್ಯಾಧಿಕಾರಿಗಳು, ಶಂಕರ, ಸುಬ್ಬಯ್ಯ, ಮಣಿಪಾಲ ಆಸ್ಪತ್ರೆ ಅಧಿಕಾರಿಗಳು, ವಿವಿಧ ಎನ್‌ಜಿಓ ಪದಾಧಿಕಾರಿಗಳು, ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...