Monday, February 2, 2026
Monday, February 2, 2026

Supreme Court ಅ. 16: ಒಳಮೀಸಲಾತಿ ಜಾರಿಗೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ

Date:

Supreme Court ಸುಪ್ರೀಂಕೋರ್ಟ್‌ನ ಆದೇಶದಂತೆ ಕರ್ನಾಟಕ ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅ.16 ರಂದು ಭಾರಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಶಾಖೆಯಿಂದ ಹಮ್ಮಿಕೊಳ್ಳಲಾಗಿದೆ.
ಸಮಿತಿಯ ರಾಜ್ಯ ಉಪಾಧ್ಯಕ್ಷ ತಿಮ್ಲಾಪುರ ಲೋಕೇಶ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಅಂದು ಬೆಳಿಗ್ಗೆ ಸೈನ್ಸ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಮೆರವಣಿಗೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. 3 ದಶಕಗಳಿಂದ ನಡೆಸಿದ ಒಳಮೀಸಲಾತಿ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ನಮ್ಮ ಪರ Supreme Court ತೀರ್ಪುನೀಡಿದ್ದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಮೀನಾಮೇಷ ನಡೆಸುತ್ತಿದ್ದು, ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಸುಪ್ರಿಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕು. ಒಂದು ವೇಳೆ ಜಾರಿಗೊಳಿಸದಿದ್ದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲಂಘಿಸಿರುವುದಕ್ಕೆ ಕಾನೂನು ಹೋರಾಟದ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಹಾಗೂ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...