Thursday, June 18, 2026
Thursday, June 18, 2026

Thirthahalli Accident News ಬೆಜ್ಜುವಳ್ಳಿಯಲ್ಲಿ ಅಪಘಾತ. ವಿದ್ಯಾರ್ಥಿಯ ಸಾವು

Date:

Thirthahalli Accident News ತೀರ್ಥಹಳ್ಳಿ ತಾಲೂಕಿನ ಬೆಜ್ಜುವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಲೂಕಿನ ತನಿಕಲ್‌ ಸಮೀಪದ ಬಾಂಡ್ಯ ಗ್ರಾಮದ ಪ್ರಥಮ್ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈತ ತೀರ್ಥಹಳ್ಳಿಯಲ್ಲಿ ಡಿಪ್ಲೋಮೋ ಕಾಲೇಜಿಗೆ ತೆರಳುತ್ತಿದ್ದ ಎನ್ನಲಾಗಿದೆ.

ಗೋವಾ ನೋಂದಣಿಯ ಬಸ್ ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಆಗಿದೆ. ಗಂಭೀರ ಗಾಯಗೊಂಡಿದ್ದ ಪ್ರಥಮ್‌ನನ್ನು ಕೂಡಲೇ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸಾಗಿಸಲಾಯಿತಾದರು ಆತ ಮಾರ್ಗ ಮಧ್ಯೆ ಮೃತಪಟ್ಟಿರುವುದನ್ನು ವೈದ್ಯರು ಖಚಿತ ಪಡಿಸಿದ್ದಾರೆ.

Thirthahalli Accident News ಅಘಪಾತದ ಭೀಕರ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಬೈಕ್ ಸವಾರ ಏಕಾಏಕಿ ಮುಖ್ಯ ರಸ್ತೆ ಪ್ರವೇಶಿಸಿರುವುದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್‌ ಸಂಪೂರ್ಣ ಜಖಂಗೊಂಡಿದೆ. ಬಸ್ ನ ಮುಂಭಾಗ ಸಹ ನುಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...