Thursday, June 18, 2026
Thursday, June 18, 2026

Muda scam ಮೂಡಾ ಕಚೇರಿಗೆ “ಇಡಿ” ದಾಳಿ.ದಾಖಲೆಗಳ ಪರಿಶೀಲನೆ

Date:

Muda scam ಮುಡಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಸುಮಾರು 20 ಮಂದಿ ಇಡಿ ಅಧಿಕಾರಿಗಳು ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ದೂರು ಹಿನ್ನೆಲೆಯಲ್ಲಿ ಇಂದು ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

Muda scam ಮುಡಾದಲ್ಲಿ 5 ಸಾವಿರ ಕೋಟಿ ರೂಪಾಯಿ ಅಕ್ರಮ ನಡೆದಿದೆ. ಸಿಎಂ ಅಧಿಕಾರ ದುರುಪಯೋಗ ಪಡಿಸಿ ಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ಸಂಬಂಧ ಇದೀಗ ದಾಳಿಯಾಗಿದೆ.
ಭೂಮಾಲೀಕ ಮುಡಾ ಪ್ರಕರಣ 4ನೇ ಆರೋಪಿ ದೇವರಾಜು ಅವರ ಕೇಂಗೇರಿ ನಿವಾಸದ ಮೇಲೂ ಇಡಿ ಅಧಿಕಾರಿಗಳು ರೇಡ್ ನಡೆಸಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...