Thursday, March 19, 2026
Thursday, March 19, 2026

FIR against Yatnal ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಮತ್ತು ಸಚಿವ ಜಮೀರ್ ವಿರುದ್ದ್ ಅವಹೇಳನ ಹೇಳಿಕೆ:ಯತ್ನಾಳ್ ವಿರುದ್ಧ ಎಫ್ ಐ ಆರ್ ದಾಖಲು

Date:

FIR against Yatnal ವಿಜಯಪುರ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿದ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರ ವಿರುದ್ಧ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಜಯಪುರ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
FIR against Yatnal “ಯತ್ನಾಳ್ ಮತ್ತು ಇತರರು ಹಿಂದೂ-ಮುಸ್ಲಿಮರ ನಡುವೆ ಗಲಭೆ ಸೃಷ್ಟಿಸುವ ಉದ್ದೇಶದಿಂದ ಭಾಷಣ ಮಾಡಿದ್ದು, ಕೋಮುಗಲಭೆ ಆಗುವ ಲಕ್ಷಣಗಳು ಕಂಡು ಬರುತ್ತಿವೆ. ಭಯದ ವಾತಾವರಣ ಮೂಡಿಸಿದ ಕಾರಣ ಶಾಸಕ ಯತ್ನಾಳ್ ಹಾಗೂ ವೇದಿಕೆ ಮೇಲಿದ್ದ ಇತರರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪರಶುರಾಮ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ಯತ್ನಾಳ್ ಭಾಷಣ ಕೇಳಿ ಪರಶುರಾಮ ಅವರು ದೂರು ಕೊಟ್ಟಿದ್ದಾರೆ. ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಯು/ಎಸ್‌-352(3) ಅಡಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...