Monday, November 25, 2024
Monday, November 25, 2024

BY Raghavendra ಸಮುದಾಯ ಅಭಿವೃದ್ಧಿಗೆ ಸಂಘಟನೆ ಅವಶ್ಯ- ಬಿ.ವೈ.ರಾಘವೇಂದ್ರ

Date:

BY Raghavendra ಶಿವಮೊಗ್ಗ ಸಮುದಾಯಗಳು ಸದೃಢವಾಗಲು ಸಂಘಟನೆಯು ಅತ್ಯಂತ ಅವಶ್ಯಕ. ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಸಂಘಟನೆಯು ಮಹತ್ತರ ಪಾತ್ರ ವಹಿಸುತ್ತದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ನಗರದ ಸ್ಕೌಟ್ ಭವನದಲ್ಲಿ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಸರ್ವ ಸದಸ್ಯರ ಮಹಾಸಭೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಧಕರು ಸಮಾಜದ ಆಸ್ತಿ. ಸಾಧನೆಯನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು. ಹಿರಿಯ ನಾಗರಿಕರ ಸೇವೆ ದೇವರ ಸೇವೆಗೆ ಸಮಾನ. ಜಿಲ್ಲಾ ಗಾಣಿ ಸಮಾಜವು ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು 20 ವಿದ್ಯಾರ್ಥಿಗಳಿಗೆ ತಾಯಿಯ ಹೆಸರಿನಲ್ಲಿ 20 ಸಾವಿರ ರೂ. ನಗದು ಬಹುಮಾನ ನೀಡಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ, ಗಾಣಿಗ ಸಮಾಜದ ಮುಖಂಡ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ನಮ್ಮ ಸಮಾಜ ತುಂಬಾ ಚಿಕ್ಕ ಸಮಾಜ ಆಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ. ಸಮಾಜಕ್ಕೆ ಅವಶ್ಯವಿರುವ ಕಟ್ಟಡ ನಿರ್ಮಾಣಕ್ಕೆ ಎಲ್ಲ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.
BY Raghavendra ಭದ್ರಾವತಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಮಾತನಾಡಿ, ರಾಜಕೀಯವಾಗಿ ಉತ್ತಮವಾಗಿ ಬೆಳೆಯಲು ಗಾಣಿಗ ಸಮಾಜ ಬೆನ್ನು ತಟ್ಟಿ ಆಶೀರ್ವದಿಸಿದೆ. ನಮ್ಮ ಗಳಿಕೆಯಲ್ಲಿ ಸಮಾಜಸೇವೆಯು ಸ್ವಲ್ಪ ಹಣ ವಿನಿಯೋಗಿಸಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಘಕ್ಕೆ ಅವಶ್ಯವಿರುವ ಕಟ್ಟಡ ನಿರ್ಮಾಣವನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.
ಉಪಾಧ್ಯಕ್ಷ ಎಸ್.ಎಸ್.ಸತೀಶ್, ಎನ್.ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್ ಎಂ.ಆರ್., ರವಿ.ಎಸ್ , ಇಂದೂಧರ, ಗುರುರಾಜ್, ಆನಂದಕುಮಾರ್, ವಾಗೀಶ್ ಕೋಟಿ, ಸಿದ್ದಲಿಂಗಪ್ಪ, ಜಯಂತ್, ಮಲ್ಲಿಕಾರ್ಜುನ ಕಾನೂರು, ರವೀಶ್, ಎನ್.ಜಿ.ಲೋಕೇಶ್, ಆಡಳಿತ ಮಂಡಳಿ ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...