Department Of Skill Development ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಜಿಲ್ಲೆಯ ಪ.ಜಾತಿ/ಪ.ಪಂಗಡದ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲಾಭಿವೃದ್ದಿ ತರಬೇತಿ ಕಾರ್ಯಕ್ರಮನ್ನು ನ.15 ರಿಂದ 26 ರವರೆಗೆ ಆಯೋಜಿಸಲಾಗುವುದು.
ಶಿಬಿರಾರ್ಥಿಗಳಿಗೆ ಉದ್ಯಮ ನಿರ್ವಹಣೆ, ಸರ್ಕಾರದ ಸ್ವಯಂ ಉದ್ಯೋಗ, ಉದ್ಯಮಾವಕಾಶ ಕುರಿತು ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು.
ಕೈಗಾರಿಕಾ ಭೇಟಿ ಮಾಡಿಸಲಾಗುವುದು.
18 ರಿಂದ 55 ವಯೋಮಿತಿ ಒಳಗಿನ 10 ನೇ ತರಗತಿ ಪಾಸಾದ ಪ.ಜಾತಿ/ಪ.ಪಂ ಮಹಿಳಾ ಉದ್ಯಮಾಕಾಂಕ್ಷಿಗಳು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್ಸ್, ನೆಹರು ರಸ್ತೆ, ಶಿವಮೊಗ್ಗ, ಅವಿನಾಶ್ ಎ, ಸಿಡಾಕ್ ತರಬೇತುದಾರರು ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
Department Of Skill Development ಅರ್ಜಿಯೊಂದಿಗೆ 2 ಪಾಸ್‌ಪೋರ್ಟ್ ಅಳತೆ ಫೋಟೊ ಹಾಗೂ ಆಧಾರ್ ಕಾರ್ಡ್ನ ಪ್ರತಿ ಸಲ್ಲಿಸಬೇಕು. ತರಬೇತಿ ಉಚಿತವಾಗಿದ್ದು ತರಬೇತಿ ವೇಳೆ ಊಟೋಪಚಾರ ಒದಗಿಸಲಾಗುವುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.