Friday, November 22, 2024
Friday, November 22, 2024

Department of Health and Family Welfare ಪರಿಸರ ಸಮತೋಲನಕ್ಕೆ ಗಿಡಮರಗಳು ಅವಶ್ಯ- ಪ್ರೊ.ಕುಮಾರಸ್ವಾಮಿ

Date:

Department of Health and Family Welfare ಮನುಷ್ಯನ ದುರಾಸೆಯಿಂದ ಪರಿಸರ ವಿನಾಶದತ್ತ ಸಾಗುತ್ತಿದ್ದು, ನಗರೀಕರಣದಿಂದ ಗಿಡ ಮರಗಳನ್ನು ನೆಡಲು ಸ್ಥಳವೇ ಇಲ್ಲವಾಗಿದೆ. ಪರಿಸರ ಸಮತೋಲನಕ್ಕೆ ಗಿಡಮರಗಳು ಅತ್ಯಂತ ಅವಶ್ಯಕ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಹೇಳಿದರು.

ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯರ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹವಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ಬಗ್ಗೆ” ಮಾತನಾಡಿದರು.
ವಾಯುಮಾಲಿನ್ಯದಿಂದ ಮನುಷ್ಯರಿಗೆ ಹೊಸ ಹೊಸ ರೀತಿ ಕಾಯಿಲೆಗಳು ಬರುತ್ತಿವೆ. ಪರಿಸರ ಸಂರಕ್ಷಣೆ ಮಾಡದಿರುವ ಕಾರಣ ಹವಮಾನದಲ್ಲಿ ಬದಲಾವಣೆ ಆಗುತ್ತಿದ್ದು, ಯಾವಾಗ ಬೇಕಾದರೂ ಮಳೆ, ಬಿಸಿಲು ಎಂಬ ವಾತಾವರಣ ಸೃಷ್ಟಿಯಾಗಿದೆ. ಪ್ರಕೃತಿ ಅಸಮತೋಲನದಿಂದ ಬೆಳೆಯಲ್ಲಿ ಏರುಪೇರಾಗುತ್ತಿದೆ ಎಂದು ತಿಳಿಸಿದರು.

Department of Health and Family Welfare ಅತಿಯಾದ ರಾಸಾಯನಿಕ ಬಳಕೆಯಿಂದ ಪ್ರಕೃತಿ ವಿನಾಶದಂಚಿಗೆ ಸಾಗುತ್ತಿದೆ. ಹವಮಾನ ವೈಪರೀತ್ಯವು ಬಹುಮುಖ್ಯ ಕಾರಣವಾಗಿದೆ. ಮನುಷ್ಯನ ಜೀವಿತ ಅವಧಿಯು ಕುಂಠಿತವಾಗುತ್ತಿದೆ. ಈಗಲೇ ನಾವೆಲ್ಲರು ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ನೋಡಲ್ ಅಧಿಕಾರಿ ಡಾ. ಗುಡದಪ್ಪ ಕಸಬಿ ಮಾತನಾಡಿ, ವೈದ್ಯರ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ತರಬೇತಿ ನೀಡುವ ಮೂಲಕ ಜಿಲ್ಲೆಯ ಜನರಿಗೆ ಸಮಗ್ರ ಮಾಹಿತಿ ತಲುಪಿಸುವ ಪ್ರಯತ್ನ ಇದಾಗಿದೆ. ಆರೋಗ್ಯ, ಪರಿಸರ ಸಂರಕ್ಷಣೆ, ಹವಮಾನ ವೈಪರೀತ್ಯದ ಬಗ್ಗೆ ಜನರು ತಿಳವಳಿಕೆ ಹೊಂದಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಅವರನ್ನು ಅಭಿನಂದಿಸಲಾಯಿತು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್.ಕೆ.ಎಸ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯೆ ಡಾ. ಶಮಾ ಬೇಗಂ, ಜಿಲ್ಲಾ ಲೆಪ್ರಸಿ ಅಧಿಕಾರಿ ಡಾ. ಕಿರಣ್ ಎಸ್.ಕೆ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಡಾ ಸುರೇಶ್, ಡಾ. ಚಂದ್ರಶೇಖರ್, ಡಾ. ಅನಿಕೇತನ್, ಡಾ. ನವೀದ್ ಖಾನ್, ಜಿಲ್ಲಾ ಮಲೇರಿಯಾ ಕಚೇರಿ ಹಿರಿಯ ಆರೋಗ್ಯ ಸಹಾಯಕರಾದ ನಾರಾಯಣ್, ಯಜುರ್ವೇದ, ತಿಪ್ಪೆಸ್ವಾಮಿ, ಧೀರೆಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...