Rotary Shivamogga ಸರ್ಕಾರಿ ಶಾಲೆಯಲ್ಲಿ ಅಧ್ಯಯನ ನಡೆಸುತ್ತಿರುವ ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಘ ಸಂಸ್ಥೆಗಳ ನೆರವು ಅಗತ್ಯ. ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಹೇಳಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ಹಾಗೂ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ನಿದಿಗೆ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ 50 ಸೆಟ್ ಯೂನಿಫಾರಂ ಕೋಟ್ ಹಾಗೂ ಅಗತ್ಯ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯಗಳನ್ನು ಸಂಘ ಸಂಸ್ಥೆಗಳು ಒದಗಿಸಿದರೆ ಶಾಲೆಯಲ್ಲಿನ ವಿದ್ಯಾರ್ಥಿಗಳು ಮಹತ್ತರ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಮಕ್ಕಳ ಕಲಿಕಾ ಗುಣಮಟ್ಟ ವೃದ್ಧಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ನಿದಿಗೆ ಶಾಲೆಯಲ್ಲಿ ಸ್ವಚ್ಛ ಸುಂದರ ಪರಿಸರದ ವಾತಾವರಣ ಕಾಪಾಡಿಕೊಳ್ಳುತ್ತಿದ್ದು, ಮಕ್ಕಳ ಕಲಿಕೆಗೆ ಪೂರಕವಾಗಿ ಅವಶ್ಯವಿರುವ ವಸ್ತುಗಳನ್ನು ನೀಡುವುದು ಅವಶ್ಯಕ. ಮಕ್ಕಳಿಗೆ ಅಗತ್ಯ ಮಾರ್ಗದರ್ಶನವನ್ನು ಶಿಕ್ಷಕರು ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.
Rotary Shivamogga ಇದೇ ಸಂದರ್ಭದಲ್ಲಿ ಸಿದ್ದಶ್ರೀ ಮಾರ್ಕೆಟಿಂಗ್ ಮಾಲೀಕ ವಿನೋದಕುಮಾರ್ ಜೈನ್ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳಿಗೆ ನೆರವು ನೀಡಿದರೆ ಅವರ ಭವಿಷ್ಯ ಸುಂದರಗೊಳಿಸಲು ಸಾಧ್ಯವಾಗುತ್ತದೆ. ಉನ್ನತ ಹುದ್ದೆ ತಲುಪಿದ ನಂತರ ಹೆಚ್ಚಿನ ಸೇವೆ ಮಾಡಲು ಮುಂದಾಗಬೇಕು. ಅನೇಕರಿಗೆ ಸ್ಪೂರ್ತಿಯಾಗುತ್ತದೆ ಎಂದು ತಿಳಿಸಿದರು.
ಮುಖ್ಯಶಿಕ್ಷಕಿ ತುಳಸಿ ಅಡಿಗ ಮಾತನಾಡಿ, ಹತ್ತು ವರ್ಷಗಳಿಂದ ವಿಜಯಕುಮಾರ್ ಅವರು ಅನೇಕ ದಾನಿಗಳು ಹಾಗೂ ಸಂಘ ಸಂಸ್ಥೆಗಳ ನೆರವಿನಿಂದ ಶಾಲೆ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದು, ಸಂಘ ಸಂಸ್ಥೆಗಳು ಕುಡಿಯುವ ನೀರಿನ ಘಟಕ ಹಾಗೂ ಅಗತ್ಯ ಸೌಕರ್ಯಗಳನ್ನು ಒದಗಿಸಿವೆ ಎಂದು ತಿಳಿಸಿದರು.
ಸಹಶಿಕ್ಷಕಿ ಸೋಮಿಬಾಯಿ ಹಾಗೂ ರೋಟರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.