Tuesday, April 22, 2025
Tuesday, April 22, 2025

B. Y. Raghavendra ರೈಲ್ವೆ ಕೋಚಿಂಗ್ ಡಿಪೊ ಆರಂಭದ ನಂತರ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಸಂಪರ್ಕ ಸಾಧ್ಯವಾಗಲಿದೆ- ಸಂಸದ ರಾಘವೇಂದ್ರ

Date:

B. Y. Raghavendra ಬೀರೂರು ಮತ್ತು ಶಿವಮೊಗ್ಗ ರೈಲ್ವೆ ಮಾರ್ಗದ ಡಬ್ಲಿಂಗ್ ಕಾಮಗಾರಿಗೆ ಶೀಘ್ರದಲ್ಲಿ 1,900 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ಆರಂಭದ ನಂತರ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಸಂಪರ್ಕ ಸಾಧ್ಯವಾಗಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಡಬ್ಲಿಂಗ್ ಕೆಲಸ, ಶಿವಮೊಗ್ಗ ಮತ್ತು ರಾಣೆಬೆನ್ನೂರು ರೈಲು ಮಾರ್ಗ ಪೂರ್ಣವಾದರೆ ರೈಲ್ವೆ ನಕ್ಷೆಯಲ್ಲಿ ಶಿವಮೊಗ್ಗ ಹೆಚ್ಚು ಪ್ರಗತಿ ಸಾಧಿಸಲಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿರಂತರವಾಗಿ ಗಮನ ವಹಿಸಿದ ಪರಿಣಾಮ ಮಹತ್ತರ ಯೋಜನೆಗಳನ್ನು ಶಿವಮೊಗ್ಗಕ್ಕೆ ತರಲು ಸಾಧ್ಯವಾಯಿತು. ಎಲ್ಲ ಹಂತಗಳಲ್ಲಿ ಗಮನಿಸಿದರೆ ಕಾಮಗಾರಿಗಳು ಶೀಘ್ರವಾಗಿ ಅನುಷ್ಠಾನವಾಗುತ್ತದೆ. ಶಿವಮೊಗ್ಗದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕ ಮತ್ತು ಸಾಫ್ಟ್ವೇರ್ ಉದ್ಯಮಗಳ ಸ್ಥಾಪನೆಗೆ ಸಂಬಂಧಿಸಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹೆಚ್ಚು ಆಸಕ್ತಿ ವಹಿಸುತ್ತಿದೆ. ಅದಕ್ಕೆ ಪೂರಕವಾಗಿ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.

ಹೊಸನಗರ ಮತ್ತು ಕೊಲ್ಲೂರು ರಸ್ತೆ, ತ್ಯಾವರೆಕೊಪ್ಪ ಮತ್ತು ತಾಳಗುಪ್ಪ ಚತುಷ್ಪಥ ರಸ್ತೆಯು ಮುಂದಿನ ದಿನಗಳಲ್ಲಿ ಗಮನ ಸೆಳೆಯಲಿವೆ. ಸಿಗಂದೂರು ಸೇತುವೆ ಇನ್ನು ಐದಾರು ತಿಂಗಳಲ್ಲಿ ಲೋಕಾರ್ಪಣೆ ಆಗಲಿದೆ. ಸಂಘವು ಆಯೋಜಿಸಲು ಉದ್ದೇಶಿಸಿರುವ ಶಿವಮೊಗ್ಗ ಹಬ್ಬ ಪರಿಕಲ್ಪನೆ ಉತ್ತಮವಾಗಿದ್ದು, ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ನೈಟ್ ಲ್ಯಾಂಡಿಂಗ್ ಕಾಮಗಾರಿಯು ಶಿವಮೊಗ್ಗದಲ್ಲಿ ಇನ್ನೊಂದು ತಿಂಗಳಲ್ಲಿ ಪೂರ್ಣವಾಗಲಿದೆ. ದೆಹಲಿ, ಅಹಮದಾಬಾದ್ ನಡುವೆ ಶಿವಮೊಗ್ಗದಿಂದ ನೇರ ವಿಮಾನಯಾನ ಆರಂಭವಾಗಲಿದೆ. ಮುಂಬೈ ನಗರಕ್ಕೆ ಸಂಬಂಧಿಸಿ ವಿಮಾನ ಸಂಪರ್ಕಕ್ಕೆ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಕೊಡುಗೆ ಅಪಾರ. ರಸ್ತೆ, ರೈಲು, ವಿಮಾನ ಸಂಪರ್ಕ ಕ್ಷೇತ್ರಗಳಲ್ಲಿ ಪ್ರಮುಖ ಯೋಜನೆಗಳು ಅನುಷ್ಠಾನಗೊಂಡಿವೆ. ಜಿಲ್ಲೆಯ ಜನರ ಕನಸು ನನಸಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ತಂದಿದ್ದಾರೆ ಎಂದು ಹೇಳಿದರು.

B. Y. Raghavendra ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ಉದ್ಯಮಿಗಳಿಗೆ ಉತ್ತಮ ವೇದಿಕೆ ಒದಗಿಸುವ ಆಶಯದಿಂದ ಡಿಸೆಂಬರ್‌ನಲ್ಲಿ ಶಿವಮೊಗ್ಗ ಎಕ್ಸ್ಪೋ ಆಯೋಜಿಸಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ವಾಣಿಜ್ಯ ಕೈಗಾರಿಕಾ, ಪ್ರವಾಸೋದ್ಯಮ ಪ್ರೋತ್ಸಾಹಿಸಲು 2025ರ ಏಪ್ರಿಲ್‌ನಲ್ಲಿ ಶಿವಮೊಗ್ಗ ಹಬ್ಬ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಅವರು ನಿರಂತರವಾಗಿ ಯೋಜನೆಗಳ ಬಗ್ಗೆ ಆಲೋಚಿಸಿ ಅನುಷ್ಠಾನ ಮಾಡಲು ಪರಿಶ್ರಮ ವಹಿಸಿದ್ದಾರೆ. ಪರಿಣಾಮ ಶಿವಮೊಗ್ಗ ಸಮಗ್ರ ಅಭಿವೃದ್ಧಿಯಲ್ಲಿ ಸಾಗುತ್ತಿದೆ ಎಂದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಸುರೇಶ್ ಎ.ಎಂ., ಖಜಾಂಚಿ ಮನೋಹರ್ ಆರ್., ಜಂಟಿ ಕಾರ್ಯದರ್ಶಿ ಸುಕುಮಾರ್, ಪ್ರಮುಖರಾದ ಉದಯಕುಮಾರ್ ಎಸ್.ಎಸ್., ರುದ್ರೇಶ್.ಪಿ, ವಸಂತ ಹೋಬಳಿದಾರ್, ಪ್ರದೀಪ್ ಎಲಿ, ಗಣೇಶ ಅಂಗಡಿ, ವಿ.ಕೆ.ಜೈನ್, ಕಿರಣ್ ಕುಮಾರ್, ಶಿವಕುಮಾರ್, ಶಂಕರ್ ಎಸ್.ಪಿ., ಸಿ.ಎ.ಶರತ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....