Wednesday, November 6, 2024
Wednesday, November 6, 2024

State Bank of India ನ್ಯಾಮತಿ ಎಸ್ ಬಿ ಐ ನಿಂದ ಹಣ,ಚಿನ್ನಾಭರಣ ಅಪಹರಣ

Date:

State Bank of India ಕಳ್ಳರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದ ಕಿಟಕಿಯ ಸರಳು ಮುರಿದು ಜಿಲ್ಲೆಯ ನ್ಯಾಮತಿ ಪಟ್ಟಣದ ನೆಹರು ರಸ್ತೆಯಲ್ಲಿರುವ ಶಾಖೆಯಲ್ಲಿ ಹಣ ಚಿನ್ನಾಭರಣ ಕದ್ದೊಯ್ದಿರುವ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆಯೇ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶನಿವಾರ ಹಾಗು ಭಾನುವಾರ ಎರಡು ದಿನಗಳ ಕಾಲ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಕಿಟಕಿಯ ಸರಳುಗಳನ್ನು ಮುರಿದು ಎಸ್ ಬಿಐ ಬ್ಯಾಂಕ್ ಗೆ ನುಗ್ಗಿರುವ ದರೋಡೆಕೋರರು ಇಡೀ ಬ್ಯಾಂಕ್ ತಡಕಾಡಿದ್ದಾರೆ. ಬಳಿಕ ಬ್ಯಾಂಕ್ ನ ಮೇನ್ ಲಾಕರ್ ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ.

ಅಲ್ಲದೆ ಚಿನ್ನಾಭರಣ ಮತ್ತು ನಗದು ಜೊತೆಗೆ ಕಳ್ಳರು ಸಿಸಿಟಿವಿ ಕ್ಯಾಮರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ಕರ್ತವ್ಯಕ್ಕೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

State Bank of India ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನ್ಯಾಮತಿ ಪೊಲೀಸ್ ಠಾಣೆಯ ಪಿಐ ಎನ್.ಎಸ್. ರವಿ ಅವರ ನೇತೃತ್ವದ ಪೊಲೀಸರ ತಂಡ ಪರಿಶೀಲನೆ ನಡೆಸುತ್ತಿದೆ. ಕೋಟ್ಯಂತರ ಮೌಲ್ಯದ ಚಿನ್ನಾಭರಣ ದರೋಡೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಬೇಕಿದೆ.

ನ್ಯಾಮತಿ ಠಾಣೆಯ ಪಿಐ ರವಿ ಎನ್ಎಸ್ ಅವರು “ಬ್ಯಾಂಕಿನ ಕಿಟಕಿಯ ಸರಳು ಮುರಿದು ಕಳ್ಳರು ಬ್ಯಾಂಕ್ ಲೂಟಿ ಮಾಡಿದ್ದಾರೆ. ಈ ಘಟನೆ ಶುಕ್ರವಾರ ಇಲ್ಲ ಶನಿವಾರ ನಡೆದಿರಬಹುದು. ಈಗಾಗಲೇ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸುತ್ತಿದ್ದು, ಅವರು ಬಂದು ಹೋದ ಬಳಿಕ ಎಷ್ಟು ಹಣ, ಚಿನ್ನಾಭರಣ ಕಳ್ಳತನ ಆಗಿದೆ ಅನ್ನೋದು ಗೊತ್ತಾಗಲಿದೆ‌. ಎಷ್ಟು ಮೌಲ್ಯದ ಚಿನ್ನಾಭರಣ ಹಣ ಕಳ್ಳತನ ಆಗಿದೆ ಎಂದು ತಿಳಿದ ಬಳಿಕ ಎಫ್ಐಆರ್ ಮಾಡಲಾಗುವುದು” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddhramaiah ಮೂಡಾ ಬಗ್ಗೆ ಲೋಕಾಯುಕ್ತ ವಿಚಾರಣೆಯಲ್ಲಿ ಸೀಎಂ ಸಿದ್ಧರಾಮಯ್ಯ ಹೇಳಿದ್ದೇನು?

CM Siddhramaiah ಮುಡಾ ಪ್ರಕರಣ ಸಂಬಂಧ ಇಂದು( ಬುಧವಾರ) ಲೋಕಾಯುಕ್ತ...

Dnaneshwari Goshala ಗೋಪೂಜೆಯಿಂದ ಮನಸ್ಸಿಗೆ ಶಾಂತಿ & ನೆಮ್ಮದಿ- ಚಂದ್ರಹಾಸ.ಪಿ‌.ರಾಯ್ಕರ್

Dnaneshwari Goshala ಗೋವಿನ ಪೂಜೆ ಮಾಡುವುದರಿಂದ ಕೋಟ್ಯಾಂತರ ದೇವರ ಪೂಜಿಸಿದ ಪುಣ್ಯ...

Election Commission ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಮತದಾರರ ಪಟ್ಟಿ ಪ್ರಕಟಣೆ

Election Commission ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಕ್ಕೆ ಸಂಬAಧಿಸಿದAತೆ...