Thursday, November 7, 2024
Thursday, November 7, 2024

Chamber Of Commerce Shivamogga ನಾವೆಲ್ಲರೂ ಸೇರಿ ಸ್ವಚ್ಛ ನಗರ ನಿರ್ಮಾಣ ಮಾಡೋಣ- ಬಿ.ಗೋಪಿನಾಥ್

Date:

Chamber Of Commerce Shivamogga ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಮಹತ್ತರ ಆಗಿರುತ್ತದೆ. ದೇಶದ ಪ್ರಗತಿಗೆ ಯುವಜನತೆ ಕೈಜೋಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಭಿಪ್ರಾಯಪಟ್ಟರು.

ನಗರದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ನಿರ್ದೇಶನದಂತೆ ನೆಹರು ಯುವ ಕೇಂದ್ರದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವಜನರು ಪರಿಸರ ಸಂರಕ್ಷಣೆ ಮಾಡುವ ವಿಶೇಷ ಸಂಕಲ್ಪ ಹೊಂದಬೇಕು. ಕಾಳಜಿ ವಹಿಸುವ ಮೂಲಕ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು. ಸ್ವಚ್ಛ ನಗರ ನಿರ್ಮಾಣ ಮಾಡಲು ಸಹಕಾರ ನೀಡಬೇಕು. ನಾವೆಲ್ಲರೂ ಸೇರಿ ಸ್ವಚ್ಛ ಹಾಗೂ ಸುಂದರ ನಗರ ನಿರ್ಮಿಸೋಣ ಎಂದು ತಿಳಿಸಿದರು.

ಸಮಾಜ ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಪ್ರತಿಯೊಬ್ಬರ ಪಾತ್ರವೂ ಮುಖ್ಯ ಆಗಿರುತ್ತದೆ. ಎಲ್ಲೆಂದರಲ್ಲಿ ಕಸ ಎಸೆಯದೆ ಸೂಕ್ತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ಶ್ರಮದಾನ ಮಾಡುವ ಮೂಲಕ ಸಾರ್ವಜನಿಕ ಸ್ಥಳಗಳನ್ನೂ ಸ್ವಚ್ಛವಾಗಿಟ್ಟುಕೊಳ್ಳಲು ನಾವೆಲ್ಲರೂ ಮುಂದಾಗಬೇಕು. ಆರೋಗ್ಯಯುತ ವಾತಾವರಣ ನಿರ್ಮಾಣ ನಮ್ಮ ಗುರಿಯಾಗಬೇಕು. ಹಸಿರು ಪಟಾಕಿಗಳನ್ನು ಬಳಸುವುದರ ಮೂಲಕ ಮಾಲಿನ್ಯ ಕಡಿಮೆ ಮಾಡಬೇಕು ಎಂದರು.

Chamber Of Commerce Shivamogga ಕುವೆಂಪು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಶುಭಾ ಮರವಂತೆ ಮಾತನಾಡಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಅಭಿಯಾನ ನಡೆಸುತ್ತಿದ್ದು, ಎಲ್ಲರೂ ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಶ್ರಮದಾನ ಕಾರ್ಯಕ್ರಮದಲ್ಲಿ 230ಕ್ಕೂ ಹೆಚ್ಚು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಾಲ್ಗೊಂಡು ಬಿ.ಹೆಚ್. ರಸ್ತೆ, ಗಾಂಧಿ ಬಜಾರ್ ಹಾಗೂ ವೀರಶೈವ ಕಲ್ಯಾಣ ಮಂದಿರ ರಸ್ತೆ ಸ್ವಚ್ಛ ಮಾಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಎಟಿಎನ್‌ಸಿಸಿ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ನಾಗರಾಜ್, ಸಹಪ್ರಾಧ್ಯಾಪಕ ನವೀನ್, ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎಟಿಎನ್‌ಸಿಸಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddhramaiah ಮೂಡಾ ಬಗ್ಗೆ ಲೋಕಾಯುಕ್ತ ವಿಚಾರಣೆಯಲ್ಲಿ ಸೀಎಂ ಸಿದ್ಧರಾಮಯ್ಯ ಹೇಳಿದ್ದೇನು?

CM Siddhramaiah ಮುಡಾ ಪ್ರಕರಣ ಸಂಬಂಧ ಇಂದು( ಬುಧವಾರ) ಲೋಕಾಯುಕ್ತ...

Dnaneshwari Goshala ಗೋಪೂಜೆಯಿಂದ ಮನಸ್ಸಿಗೆ ಶಾಂತಿ & ನೆಮ್ಮದಿ- ಚಂದ್ರಹಾಸ.ಪಿ‌.ರಾಯ್ಕರ್

Dnaneshwari Goshala ಗೋವಿನ ಪೂಜೆ ಮಾಡುವುದರಿಂದ ಕೋಟ್ಯಾಂತರ ದೇವರ ಪೂಜಿಸಿದ ಪುಣ್ಯ...

Election Commission ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಮತದಾರರ ಪಟ್ಟಿ ಪ್ರಕಟಣೆ

Election Commission ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಕ್ಕೆ ಸಂಬAಧಿಸಿದAತೆ...