H.K. Patil ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,” ಒಳಮೀಸಲಾತಿ ಕಲ್ಪಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿದೆ. ಹಾಗಾಗಿ, ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಅನುಮೋದನೆ ನೀಡಿದೆ ಎಂದಿದ್ದಾರೆ.
H.K. Patil ಒಳಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಈ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದೆ. ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸಚಿವ ಡಾ!! ಹೆಚ್.ಸಿ ಮಹದೇವಪ್ಪ ಮಾತನಾಡಿ, ಚುನಾವಣಾ ಮುನ್ನ ನಾವು ಒಳಮೀಸಲಾತಿ ಜಾರಿಯ ವಾಗ್ದಾನ ಮಾಡಿದ್ದೆವು. ಸುಪ್ರೀಂ ಕೋರ್ಟ್ ಕೂಡ ಒಳಮೀಸಲಾತಿ ಪರ ತೀರ್ಪು ನೀಡಿದೆ. ನಮ್ಮ ಸರ್ಕಾರ ಒಳಮೀಸಲಾತಿ ಜಾರಿಗೆ ಬದ್ದವಾಗಿದೆ ಎಂದು ಹೇಳಿದ್ದಾರೆ.