Monday, February 2, 2026
Monday, February 2, 2026

Actor Darshan ದರ್ಶನ್ ಗೆ ಷರತ್ತು ಬದ್ಧ ಜಾಮೀನು ನೀಡಿದ ಕೋರ್ಟ್

Date:

Actor Darshan ಬಹುದಿನಗಳಿಂದ ಕುತೂಹಲ‌ ಕೆರಳಿಸಿದ್ದ ನಟ ದರ್ಶನ್ ಅವರ ಪ್ರಕರಣ ಒಂದು ಹಂತಕ್ಕೆ ಮುಟ್ಟಿದೆ.

ಪರಪ್ಪನ ಅಗ್ರಹಾರದಿಂದ ಹಿಡಿದು ಬಳ್ಳಾರಿ‌ ಜೈಲ್ ವರೆಗೂ ‌ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ
ಸುದ್ದಿಯೆಂದರೆ..
“ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಗುವುದೆ? ಇಲ್ಲವೆ?.”

ನಟ ದರ್ಶನ್ ಗೆ ಬಳ್ಳಾರಿ ಜೈಲು ಸೇರಿದ ನಂತರ ಅವರಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು.

Actor Darshan ಇದರ ಆಧಾರದ ಮೇಲೆ ದರ್ಶನ್ ಪರ ವಕೀಲರು ವಾದ ಮಂಡಿಸುತ್ತಲೇ ಬಂದಿದ್ದರು.

ಈಗ ದರ್ಶನ್ ಅವರಿಗೆ ತುರ್ತು‌ ಚಿಕಿತ್ಸೆಯ ಅಗತ್ಯವನ್ನ ಕೋರ್ಟ್ ಮನಗಂಡು ಆರುವಾರಗಳ ಷರತ್ತು ಬದ್ಧ ಜಾಮೀನು ಕರುಣಿಸಿದೆ.
ವೈದ್ಯಕೀಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಈ ಸುದ್ದಿ ತಿಳಿಯುತ್ತಲೇ ದರ್ಶನ್ ಅವರ ಅಪಾರ ಅಭಿಮಾನಿಗಳು
ಸಂತೋಷಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...