Sunday, August 2, 2026
Sunday, August 2, 2026

waqf board karnataka ಸೊರಬದಲ್ಲಿ ವಕ್ಫ್ ಮಂಡಳಿಗೆ ನೀಡಿರುವ ಅಧಿಕಾರವನ್ನ ರದ್ದು‌ಮಾಡಲು ಆಗ್ರಹ

Date:

waqf board karnataka ರಾಜ್ಯದಲ್ಲಿನ ಮಠ, ಮಂದಿರಗಳು ಮತ್ತು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಲಾಗುತ್ತಿದ್ದು, 1974ರಲ್ಲಿನ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು ಮತ್ತು ವಕ್ಫ್ ಮಂಡಳಿಗೆ ನೀಡಿರುವ ಅಪರಿಮಿತ ಅಧಿಕಾರವನ್ನು ರದ್ದು ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎಂ.ಕೆ. ಯೋಗೇಶ್ ಆಗ್ರಹಿಸಿದರು.

ತಾಲೂಕು ಬಿಜೆಪಿ ವತಿಯಿಂದ ಪಟ್ಟಣದ ತಾಲೂಕು ಕಚೇರಿಗೆ ತೆರಳಿ, ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಷಡ್ಯಂತ್ರ ರೂಪಿಸಿದೆ. ಇದು ಲ್ಯಾಂಡ್ ಜಿಹಾದ್ ಆಗಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ. ಇದರಿಂದ ರೈತರು ದಿಕ್ಕು ತೋಚದಂತಾಗಿದ್ದಾರೆ. ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಜನತೆಯ ನೆಮ್ಮದಿಯನ್ನು ಹದಗೆಡವಲು ಹವಣಿಸುತ್ತಿದೆ ಎಂದು ಆರೋಪಿಸಿದರು.
ರೈತರಿಗೆ ನೀಡಿರುವ ನೋಟಿಸ್ ಹಿಂಪಡೆದರೆ ಸಾಲದು, ಆರ್‌ಟಿಸಿಯಲ್ಲಿ ವಕ್ಫ್ ಎಂದು ನಮೂದು ಮಾಡಿರುವುದು ತಗೆದು ಹಾಕಬೇಕು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ತಡೆಯಬೇಕು. ತುಷ್ಟೀಕರಣ ರಾಜಕಾರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೈ ಬಿಡಬೇಕು. ಈಗಾಗಲೇ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಬಿಜೆಪಿಯಿಂದ ರಾಜ್ಯದಾದ್ಯಂತ ಆಂದೋಲನ ನಡೆಸಿ, ಜನರಿಗೆ ಅರಿವು ಮೂಡಿಸುವ ಜೊತೆಗೆ ರೈತರ ಪರವಾಗಿ ಧ್ವನಿ ಎತ್ತಲಾಗಿದೆ ಎಂದರು.

waqf board karnataka ರಾಜ್ಯದಲ್ಲಿ ವಕ್ಫ್ ಆಸ್ತಿ ಎಂದು ರೈತರ ಆಸ್ತಿ, ದೇವಸ್ಥಾನಗಳ ಆಸ್ತಿಯನ್ನು ನಮೂದು ಮಾಡಿರುವುದು ಸಾರ್ವಜನಿಕರಲ್ಲಿ ಚರ್ಚೆ ನಡೆಯುತ್ತಿದೆ. ತಾಲೂಕಿನಲ್ಲಿ ಯಾವುದೇ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ನಮೂದು ಮಾಡಬಾರದು. ನಮೂದು ಮಾಡಿದ್ದಲ್ಲಿ ಅಂತಹವುಗಳನ್ನು ರದ್ದು ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್ ಮಾಜಿ ಸದಸ್ಯ ಪಾಣಿ ರಾಜಪ್ಪ, ಟೌನ್ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಹಿರೇಶಕುನ, ವೈ.ಜಿ. ಗುರುಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷ ದಾನಶೇಖರ ಗೌಡ, ಪ್ರಮುಖರಾದ ಶಿವಕುಮಾರ ಗುಂಜನೂರು, ಬಸವರಾಜ ಪಾಟೀಲ್, ರಾಮಚಂದ್ರ ಉಳವಿ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...