CM Siddharamaiah ಹೊರ ರಾಜ್ಯಗಳಲ್ಲಿ ಗೋಲ್‌ಗಪ್ಪಾ ರುಚಿ ಹೆಚ್ಚಿಸಲು ಅದಕ್ಕೆ ಶೌಚಾಲಯ ಶುಚಿಗೊಳಿಸುವ ಹಾರ್ಪಿಕ್ ಮತ್ತು ಯೂರಿಯಾ ಗೊಬ್ಬರ ಬಳಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ, ವಿಚಾರಣೆ ನಡೆಸಿದಾಗ ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗಮನಕ್ಕೆ ತಂದಿದ್ದರು. ನಮ್ಮ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನಿಯಮಾನುಸಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
CM Siddharamaiah ಅದರಂತೆ ಅಕ್ಟೋಬರ್ 26 ಮತ್ತು 27ರಂದು 230 ಗೋಲ್‌ಗಪ್ಪಾದ ತಯಾರಿಕಾ ಘಟಕಗಳು / ಮಾರಾಟ ಮಳಿಗೆಗಳಿಗೆ ಪರಿಶೀಲನೆ ನಡೆಸಲು ಭೇಟಿ ನೀಡಿದ ವೇಳೆ 165 ಮಾದರಿಗಳನ್ನು ಸಂಗ್ರಹಿಸಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಸದರಿ ಘಟಕಗಳ ಪೈಕಿ 12 ಘಟಕಗಳಲ್ಲಿ ನೈರ್ಮಲ್ಯತೆಯ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ 13,000 ರೂ. ದಂಡ ವಿಧಿಸಲಾಗಿರುತ್ತದೆ ಹಾಗೂ 80 ಘಟಕಗಳಿಗೆ ನೋಟಿಸ್ ನೀಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ‘ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲು ಮನವಿ ಮಾಡಲಾಗಿದೆ