Friday, April 18, 2025
Friday, April 18, 2025

Department of School Education and Literacy ನ. 14.ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆಯ ಬಹುಮಾನ ವಿತರಣೆ

Date:

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಇವರ ಸಹಯೋಗದೊಂದಿಗೆ ಆಯೋಜಿಸಲಾದ 2024-25 ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ನ.14 ರ ಮಧ್ಯಾಹ್ನ 2.30 ಕ್ಕೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರ ಗೌರವ ಘನ ಉಪಸ್ಥಿತಿ ಇರಲಿದ್ದು ನ್ಯಾಯ ಮತ್ತು ಮಾನವ ಹಕ್ಕುಗಳ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಡಾ.ಹೆಚ್.ಕೆ.ಪಾಟೀಲ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ/ಲ್ಯಾಂಡ್ ಆರ್ಮಿ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ್, ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಬಿ.ಕೆ.ಗೋಪಾಲಕೃಷ್ಣ ಬೇಳೂರು ಇವರ ಗೌರವ ಉಪಸ್ಥಿತಿ ಇರಲಿದೆ.
ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು, ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...