CM Siddhramaiah ನನ್ನ ಜೊತೆ ಚರ್ಚೆಗೆ ಮೊದಲು ನಿಮ್ಮ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರ ಸಂಗಡ ಚರ್ಚಿಸಿ- ಸಿದ್ಧರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
CM Siddhramaiah ನನ್ನ ಜೊತೆ ಚರ್ಚೆಗೆ ಮೊದಲು ನಿಮ್ಮ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರ ಸಂಗಡ ಚರ್ಚಿಸಿ- ಸಿದ್ಧರಾಮಯ್ಯ ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಹೇಳಿದ್ದಾರೆ.
“ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
“ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?” ಎಂದು ಅವರು ಕೇಳಿದ್ದಾರೆ.
CM Siddhramaiah ನನ್ನ ಜೊತೆ ಚರ್ಚೆಗೆ ಮೊದಲು ನಿಮ್ಮ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರ ಸಂಗಡ ಚರ್ಚಿಸಿ- ಸಿದ್ಧರಾಮಯ್ಯ
Date: