Thursday, November 7, 2024
Thursday, November 7, 2024

FRUITS Software ಕೆಎಂಎಫ್ ನಿಂದ ಮೆಕ್ಕೆಜೋಳ ಪ್ರತಿ ಕ್ವಿಂಟಾಲ್ ಗೆ ₹ 2400 ನಂತೆ ಖರೀದಿ

Date:

FRUITS Software ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ರೂ.2400/- ರ ಬೆಲೆಯಲ್ಲಿ ಖರೀದಿಸಲಿದೆ.

ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ. ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, FRUITS ತಂತ್ರಾಂಶದಲ್ಲಿ ನೋಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ನೋಂದಣಿ ಪ್ರಕ್ರಿಯೆಯು ನ.11 ರಿಂದ ಪ್ರಾರಂಭವಾಗುತ್ತಿದ್ದು ದಾವಣೆಗೆರೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದಿರುತ್ತದೆ.

ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ದಪಡಿಸಿರುವ FRUITS ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಟಾನಕ್ಕೆ ತರುತ್ತಿದ್ದು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ಆಸಕ್ತ ರೈತರು, ತಮ್ಮ ಮೆಕ್ಕೆಜೋಳದ ಮಾದರಿಗಳನ್ನು ತಮ್ಮ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ನೀಡಬಹುದು.

FRUITS Software ಪ್ರತಿ ಒಬ್ಬ ರೈತರಿಂದ ಗರಿಷ್ಟ 500 ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಸೊರಬ, ಸಾಗರ ವ್ಯಾಪ್ತಿಯಲ್ಲಿ ಡಾ.ಶರತ್, ಉಪ ವ್ಯವಸ್ಥಾಪಕರು, ಮೊ.ಸಂ: 7760970616 ಇವರನ್ನು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಡಾ.ಸೂರಜ್, ಸಹಾಯಕ ವ್ಯವಸ್ಥಾಪಕರು ಮೊ.ಸಂ: 9844346640 ಹಾಗೂ ನ್ಯಾಮತಿ ತಾಲ್ಲೂಕು ವ್ಯಾಪ್ತಿಗೆ ಸಂಬಂಧಪಟ್ಟಂತೆ ಹರೀಶ್ ಕರೇಗೌಡ, ಸಹಾಯಕ ವ್ಯವಸ್ಥಾಪಕರು ಮೊ.ಸಂ: 7399530405 ರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಹಾಮ ಪಶುಘಟಕ, ಶಿಕಾರಿಪುರ ಮೊ.ಸಂ: 9606012571 ನ್ನು ಸಂಪರ್ಕಿಸಬಹುದೆಂದು ಪ್ರಧಾನ ವ್ಯವಸ್ಥಾಪಕರು, ಕಹಾಮ ಪಶು ಆಹಾರ ಘಟಕ, ಶಿಕಾರಿಪುರ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ನವೆಂಬರ್ 8.ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್ ಶಿವಮೊಗ್ಗಕ್ಕೆ ಭೇಟಿ

Rotary Shivamogga ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್ ಅವರ...

Thirtahalli Police ತೀರ್ಥಹಳ್ಳಿ ಮೃತ‌ವ್ಯಕ್ತಿಯ ಬಗ್ಗೆ ವಾರಸುದಾರರಿಗೆ ಮಾಹಿತಿ ತಿಳಿಸಲು ಪೊಲೀಸ್ ಪ್ರಕಟಣೆ

Thirtahalli Police ತೀರ್ಥಹಳ್ಳಿ ತಾಲ್ಲೂಕಿನ ಮೇಲಿನ ಕುರುವಳ್ಳಿಯಲ್ಲಿ ಕೂಲಿ ಕೆಲಸ...

Rotary Club Shivamogga ಸಾಂಸ್ಕೃತಿಕ ಕಾರ್ಯಕ್ರಮಗಳು ಪರಸ್ಪರ ಬಾಂಧವ್ಯ ಬೆಸೆಯುತ್ತವೆ- ಜಿ.ಕಿರಣ್ ಕುಮಾರ್

Rotary Club Shivamogga ಆತ್ಮವಿಶ್ವಾಸ, ಪರಸ್ಪರ ಓಡನಾಟ ವೃದ್ಧಿಸುವಲ್ಲಿ...

Nagarjuna University ರಾಜ್ಯಮಟ್ಟದ ಅಂಡರ್ 18 ವಯೋಮಿತಿ ಅಥ್ಲೆಟಿಕ್ ನಲ್ಲಿ ಅನುಷಾ ಜಿ ನಾಯಕ್ & ಅಭಿಜ್ಞಾ ಗಮನಾರ್ಹ ಸಾಧನೆ

Nagarjuna University ಇತ್ತೀಚೆಗೆ ಆಂಧ ಪ್ರದೇಶದ ಗುಂಟೂರು ನಾಗಾರ್ಜುನ ವಿಶ್ವವಿದ್ಯಾನಿಲಯದಲ್ಲಿ ನಡೆದ...