Saturday, December 6, 2025
Saturday, December 6, 2025

District Legal Services Authority ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಹಸಿರು ನಿಶಾನೆ

Date:

District Legal Services Authority ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಅಂಗವಾಗಿ ನಗರದ ನೆಹರು ಕೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸುಬ್ಬಯ್ಯ ದಂತ ವೈದ್ಯಕೀಯ & ನರ್ಸಿಂಗ್ ಕಾಲೇಜು, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಹಾಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾಕಥಾನ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಭಾರತದಲ್ಲಿ ತಡೆಗಟ್ಟಬಹುದಾದದ ರೋಗಗಳು ಮತ್ತು ಸಾವಿಗೆ ತಂಬಾಕು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಇದರ ಪರಿಣಾಮವಾಗಿ ವಾರ್ಷಿಕವಾಗಿ 1.35 ಮಿಲಿಯನ್ ಸಾವುಗಳು ಸಂಭವಿಸುತ್ತಿದೆ. ಮಕ್ಕಳು ಹದಿಹರೆಯದರಲ್ಲೇ ಸೇವನೆ ಮಾಡುವ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ.
District Legal Services Authority ಕಳೆದ ವರ್ಷದ ತಂಬಾಕು ಮುಕ್ತ ಯುವ ಅಭಿಯಾನದ ಯಶಸ್ಸಿನ ಆಧಾರದ ಮೇಲೆ ಈ ವರ್ಷವೂ ಕೂಡ ‘ತಂಬಾಕು ಮುಕ್ತ ಯುವ ಅಭಿಯಾನ 2.0’ ಎನ್ನುವ ರಾಷ್ಟಿçÃಯ ಅಭಿಯಾನಕ್ಕೆ ಸೆ.24 ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಚಾಲನೆ ನೀಡಿದ್ದು, ಜಿಲ್ಲೆಯಲ್ಲಿಯೂ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಒಟ್ಟು 160 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಘೋಷಿಸಲು ಗುರಿಯನ್ನು ನಿಗದಿಪಡಿಸಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಒಟ್ಟು 20 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು ಘೋಷಿಸಲು ಗುರಿ ನಿಗದಿಪಡಿಸಲಾಗಿದೆ.
ಪೊಲೀಸ್ ಇಲಾಖೆಯಿಂದ ಜಿಲ್ಲೆಯಲ್ಲಿ ಒಟ್ಟು 16 ತಂಬಾಕು ದಾಳಿಗಳನ್ನು ಹಮ್ಮಿಕೊಂಡು, ಪ್ರಕರಣಗಳನ್ನು ದಾಖಲಿಸಿ ದಂಡವನ್ನು ವಿಧಿಸಲು ಗುರಿ ನಿಗದಿಪಡಿಸಲಾಗಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ತಂಬಾಕು ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾಗಳನ್ನು ಹಮಿಕೊಳ್ಳಲಾಗುವುದು. ಆರೋಗ್ಯ ಇಲಾಖೆ ವತಿಯಿಂದ ಈ ಅಭಿಯಾನಕ್ಕೆ ಸಂಬAಧಿಸಿದ ತಾಂತ್ರಿಕ ಸಲಹೆ ಮತ್ತು ಸೂಚನೆಗಳನ್ನು ಎಲ್ಲಾ ಇಲಾಖೆಗಳಿಗೆ ನೀಡುವ, ಪ್ರಚಾರ ಮಾಡುವ ಹಾಗೂ ಪ್ರತಿದಿನದ ಚಟುವಟಿಕೆಗಳನ್ನು ಭಾರತ ಸರ್ಕಾರದ ಎಂಐಎಸ್ ಪೋರ್ಟಲ್‌ನಲ್ಲಿ ನಮೂದಿಸಬೇಕಾಗಿರುತ್ತದೆ. ಈ ರೀತಿಯಾಗಿ ತಂಬಾಕು ಮುಕ್ತ ಯುವ ಅಭಿಯಾನ 2.0 ಅನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಡಾ. ನಟರಾಜ್ ತಿಳಿಸಿದ್ದಾರೆ.
ಜಾಥಾ ನೆಹರು ಕ್ರೀಡಾಂಗಣದಿAದ ಹೊರಟು, ಗೋಪಿ ವೃತ್ತ ಮತ್ತು ಜಿಲ್ಲಾ ಪಂಚಾಯತ್ ರಸ್ತೆ ಮೂಲಕ ನೆಹರು ಕ್ರೀಡಾಂಗಣದಲ್ಲಿ ಸಮಾಪ್ತಿಗೊಂಡಿತು.
ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಸಂತೋಷ್ ಎಂ.ಎಸ್, ಡಿವೈಎಸ್‌ಪಿ ಬಾಬು ಅಂಜನಪ್ಪ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯ್ಕ್ ಡಿಎಲ್‌ಓ ಡಾ.ಕಿರಣ್, ಟಿಹೆಚ್‌ಓ ಡಾ.ಚಂದ್ರಶೇಖರ್, ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಲಹೆಗಾರರಾದ ಹೇಮಂತರಾಜ್ ಅರಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಸುಬ್ಬಯ್ಯ ದಂತ ವೈದ್ಯಕೀಯ & ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...