Karunada Yuva Shakti ಕನ್ನಡ ನಾಡಿನ ಆಸ್ಮಿತೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ, ಕನ್ನಡ ಭಾಷೆಗೆ ಐದು ಸಾವಿರ ವರ್ಷಗಳ ಇತಿಹಾಸವಿದೆ. ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಹೋರಾಟ ಮಾಡುವ ಮೂಲಕ ಕನ್ನಡ ನಾಡು ನುಡಿಯನ್ನು ಉಳಿಸಿದ ಸಾಹಿತಿಗಳು ಹಾಗೂ ಹೋರಾಟಗಾರ ಶ್ರಮ ಶ್ಲಾಘನೀಯವಾಗಿದೆ ಎಂದ ಅವರು ಕನ್ನಡ ನಾಡು, ನುಡಿ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ. ಅನ್ಯಭಾಷೆ ವ್ಯಾಮೋಹ ತೊರೆದು ಪ್ರತಿಯೊಬ್ಬರು ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರುನಾಡ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಎಸ್.ಎನ್.ಮಿಲನ್‌ಕುಮಾರ್ ತಿಳಿಸಿದರು.
ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ಮಕ್ಕಳಲ್ಲಿ ಅಭಿಮಾನ ಬೆಳೆಸಬೇಕು ಎಂದು ಸಲಹೆ ನೀಡಿದರು., ಭಾಷೆಗಳ ಆಧಾರದ ಮೇಲೆ ರಾಜ್ಯಗಳು ವಿಂಗಡಣೆಯಾಗಿದೆ. ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ಮಾಡಿದ ಮಹನೀಯರನ್ನು ನಾವು ಸ್ಮರಿಸಬೇಕಾಗಿದೆ. ದೈನಂದಿನ ಚಟುವಟಿಕೆಗಳಲ್ಲಿ ಕನ್ನಡ ಭಾಷೆಯನ್ನು ಬಳಸಬೇಕು. ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸಬೇಕು ಎಂದರು.
ಕನ್ನಡ ಭಾಷೆಯನ್ನು ಬಳಸಿದಾಗ ಮಾತ್ರ ಭಾಷೆ ನಶಿಸುವುದಿಲ್ಲ. ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಿಗೆ ಮಾತೃ ಭಾಷೆಯನ್ನು ಸ್ಪಷ್ಟವಾಗಿ ಬರೆಯುವುದನ್ನು ಓದುವುದನ್ನು ಕಲಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ. ಪ್ರಥಮ ಕನ್ನಡ ಸಾಮ್ರಾಜ್ಯ ಸ್ಥಾಪಕ ಮಯೂ ರವರ್ಮ, ಶೂನ್ಯ ಸಿಂಹಾಸನಾಧೀಶ ಅಲ್ಲಮಪ್ರಭು ಹಾಗೂ ಮಹಿಳಾ ವಚನಗಾರ್ತಿ ಅಕ್ಕಮಹಾದೇವಿ ಜನಿಸಿರುವುದು ನಾವೆಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ ಎಂದರು.
Karunada Yuva Shakti ಅನ್ಯ ಭಾಷೆಯನ್ನ ಪ್ರೀತಿಸಿ ಕನ್ನಡದಲ್ಲಿ ನಮ್ಮ ನಡೆ-ನುಡಿ ವ್ಯವಹಾರ. ನಡೆಯಬೇಕು. ಕನ್ನಡವನ್ನು ಉಳಿಸಿ ಬೆಳೆಸಿ ಅನ್ನುವುದಕ್ಕಿಂತ. ಕನ್ನಡವನ್ನು ನಾವು ಬಳಸಬೇಕು. ಈ ಭಾಷೆಗೆ ನೂರಾರು ಜನ ಕವಿ ಸಾಧಕರು ಲೇಖಕರು ತಮ್ಮದೇ ಆದ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಕೇವಲ ನವಂಬರ್ ಮಾತ್ರ ಕನ್ನಡ ಸೀಮಿತವಾಗಬಾರದು ಇದು ನಿರಂತರವಾಗಿ ನಡೆಯುವಂತೆ ನಮ್ಮ ಮನೆಯ ಹಬ್ಬದಂತೆ ಆಚರಣೆ ಮಾಡಬೇಕು ಹಾಗೂ ಈ ಕನ್ನಡ ಹಬ್ಬದಲ್ಲಿ ಕನ್ನಡಕ್ಕೆ ಹೋರಾಟ ಮಾಡಿದ, ಮಾಡುತ್ತಿರುವವರನ್ನು ಗುರುತಿಸಿ ಗೌರವಿಸ ಕಾರ್ಯಗಳು ಹೆಚ್ಚಾಗಿ ನಡೆಯಬೇಕು ಎನ್ನುವುದು ನನ್ನ ಮನದಾಸೆ ಎಂದಿದ್ದಾರೆ.