Gruha Lakshmi Scheme ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ 12 ತಿಂಗಳ ₹24,000 ಹಣ ಕೂಡಿಟ್ಟು ಹೊಲಿಗೆ ಯಂತ್ರ ಖರೀದಿಸಿ, ತನ್ನ ಹೆಣ್ಣುಮಕ್ಕಳಿಗೆ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕಿನ ಹಾದಿ ರೂಪಿಸಿಕೊಟ್ಟು ತಾಯ್ತನವನ್ನು ಮೆರೆದಿದ್ದಾರೆ. ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣುಮಕ್ಕಳಿಗೆ ನೆರವಾಗುವುದೇ ನಮ್ಮ ಯೋಜನೆಯ ಉದ್ದೇಶವೂ ಆಗಿದೆ. ಈ ತಾಯಿಯ ಸಂಕಲ್ಪಕ್ಕೆ ನನ್ನ ಪ್ರಣಾಮ.
ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ. ನಮ್ಮ ಗ್ಯಾರಂಟಿಗಳ ಬಗ್ಗೆ ದೇಶದ ಪ್ರಧಾನಿಯೇ ಅಪಪ್ರಚಾರಕ್ಕೆ ಇಳಿದಿರುವ, ಇಡೀ ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲೆಂದು ದಿನವಿಡೀ ಜಪಿಸುತ್ತಿರುವ ಹೊತ್ತಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿರುವುದು ಗ್ಯಾರಂಟಿ ವಿರೋಧಿಗಳೆಲ್ಲರಿಗೂ ತಪರಾಕಿ ಬಾರಿಸಿದಂತಿದೆ.
Gruha Lakshmi Scheme ಬಿಜೆಪಿ – ಜೆಡಿಎಸ್ ನಾಯಕರ ಸುಳ್ಳು, ಅಪಪ್ರಚಾರಗಳ ನಡುವೆ ನಮ್ಮ ಗ್ಯಾರಂಟಿ ಯೋಜನೆ ಗೆಲ್ಲುತ್ತಿದೆ, ಜನರ ಬದುಕು ಬದಲಿಸುತ್ತಿದೆ.
ಟೀಕೆಗಳು ಸಾಯುತ್ತಿವೆ, ಕೆಲಸಗಳು ಕಾಣುತ್ತಿವೆ. ಇನ್ನಾದರೂ ಗ್ಯಾರಂಟಿ ವಿರೋಧಿಗಳ ಕಣ್ಣು ತೆರೆಯಲಿ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.