Women And Child Development Department ಮಕ್ಕಳ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಬಾಲ ಭವನ ಸೊಸೈಟಿ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸೃಜನಾತ್ಮಕ ಕಲೆ ವಿಭಾಗದಲ್ಲಿ ಶಿವಮೊಗ್ಗ ವಿಕಾಸ ಶಾಲೆಯ 10ನೇ ತರಗತಿ ವಿದ್ಯಾರ್ಥಿ ರಘುಸಮರ್ಥ ನಾಡಿಗ್ ಭಾವಗೀತೆ ಗಾಯನದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ನವೆಂಬರ್ 14ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದೆ. ವಿಕಾಸ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
