Actor Shivarajkumar ಸ್ಯಾಂಡಲ್‌ವುಡ್‌ನ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ, ಆಪ್ತರಿಗೆ, ಚಿತ್ರರಂಗದ ಸಹೋದ್ಯೋಗಿಗಳಿಗೆ ಆತಂಕ ತಂದಿದ್ದು,ಆದರೆ ಶಿವಣ್ಣ, “ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ” ಅಂತ ಹೇಳಿದ್ದಾರೆ. ಸದ್ಯ ಚಿಕಿತ್ಸೆಯನ್ನು ಅವರು ಪಡೆದುಕೊಳ್ಳಲಿದ್ದು, ಶೀಘ್ರದಲ್ಲೇ ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನನಗೆ ಆರೋಗ್ಯ ಸಮಸ್ಯೆ ಇರುವುದು ನಿಜ. ಇದರಲ್ಲಿ ಮುಚ್ಚಿಡುವಂತಹದ್ದು ಏನೂ ಇಲ್ಲ. ಟ್ರೀಟ್‌ಮೆಂಟ್ ಕೂಡ ಪಡೆದುಕೊಳ್ಳುತ್ತಿದ್ದೇನೆ. ಹಲವು ಹಂತಗಳಲ್ಲಿ ಚಿಕಿತ್ಸೆ ನಡೆಯಲಿದೆ. ಆದರೆ, ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಆರಂಭದಲ್ಲಿ ನನಗೂ ಸ್ವಲ್ಪ ಭಯವಾಗಿತ್ತು.
Actor Shivarajkumar ಆದರೆ, ಎಲ್ಲರೂ ಧೈರ್ಯ ತುಂಬಿದ್ದಾರೆ. ನಾನು ಕೂಡ ಧೈರ್ಯದಿಂದ ಇದ್ದೇನೆ” ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.