Sri Adichunchanagiri Composite High School ಪ್ರತಿಭೆ ಎಲ್ಲಾ ಮಕ್ಕಳಲ್ಲಿ ಅಡಗಿರುತ್ತದೆ. ಅದನ್ನು ಹೊರ ತೆಗೆಯುವುದಕ್ಕಾಗಿಯೇ ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕರಾದ ಚನ್ನಬಸಪ್ಪ ಅಭಿಪ್ರಾಯ ಪಟ್ಟರು.
ಅವರು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶಿವಮೊಗ್ಗ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪಠ್ಯೇತರ ಚಟುವಟಿಗಳ ಜೊತೆಗೆ ಸಹಪಠ್ಯ ಚಟುವಟಿಕೆಗಳು ಶಿಕ್ಷಣದ ಒಂದು ಭಾಗವಾಗಿವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಶ್ರೀ ಆದಿಚುಂಚನಗಿರಿ ಶಾಖಾ ಮಠ, ಶಿವಮೊಗ್ಗ ಶಾಖೆಯ, ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ,ನಮ್ಮ ಭಾರತೀಯ ಸಂಸ್ಕೃತಿ, ಕಲೆಗೆ ಹೆಚ್ಚು ಮಹತ್ವ ನೀಡಿದೆ,ನಮ್ಮ ಗ್ರಾಮೀಣ ಜನಪದ ಕಲೆಗಳ ಸೊಗಡು ತುಂಬಾ ಅಭೂತ ಪೂರ್ವವಾದದು. ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆ ಎನ್ನುವುದು ಬೂದಿ ಮುಚ್ಚಿದ ಕೆಂಡದಂತಿರುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಆತ್ಮ ಸಾಕ್ಷಿಯಾಗಿ ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು ಎಂದ ಅವರು, ನಿಮ್ಮ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಪೋಷಕರ ಆದ್ಯ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಭಾಗ, ವಲಯ,ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
Sri Adichunchanagiri Composite High School ಕೌಶಲ್ಯವನ್ನು ಹೊರ ತೆಗೆಯುವುದಕ್ಕಾಗಿ ಶಿಕ್ಷಣ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಎಂದ ಅವರು, ಹಿಂಜರಿಕೆ ನಿಮ್ಮ ಶತ್ರು, ಅದನ್ನು ತೊಡೆದು ಹಾಕಿ ಧೈರ್ಯದಿಂದ ಹಾಗೂ ಆತ್ಮವಿಶ್ವಾಸದಿಂದ ನಿಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಪ್ರದರ್ಶಿಸಿ ಎಂದು ಕರೆ ನೀಡಿದರು.
ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ರವಿ ಹೆಚ್. ಮಾತನಾಡುತ್ತಾ, ಪ್ರತಿಭಾ ಕಾರಂಜಿಯು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣ ಮಾಡಲು ಇಂತಹ ವೇದಿಕೆಗಳು ಸಹಾಯಕವಾಗಿದೆ ಎಂದರು.
ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಹಿರಿಯಣ್ಣ ಹೆಗಡೆ, ಶ್ರೀ ಕೊಳಿಗೆ ವಾಸಪ್ಪಗೌಡ, ಸಿ.ಆರ್.ಪಿ.ಮಂಜುನಾಥ್ , ಶಿಕ್ಷಕರಾದ ಸುನಿತಾ,ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರುಗಳು, ಶಿಕ್ಷಕರು ಮತ್ತು ಪೋಷಕರು ಭಾಗಿಯಾಗಿದ್ದರು.