Friday, April 18, 2025
Friday, April 18, 2025

B.Y.Raghavendra ಶಿವಮೊಗ್ಗದಲ್ಲಿ ಬಿಎಸ್ಎನ್ಎಲ್ ನಅಸಮರ್ಪಕ ನೆಟ್ ಸೌಲಭ್ಯ: ತುರ್ತು ಕ್ರಮಕ್ಕೆ ಸಂಸದ ರಾಘವೇಂದ್ರ ಸೂಚನೆ

Date:

B.Y.Raghavendra ಶಿವಮೊಗ್ಗ ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬಿ.ಎಸ್.ಎನ್.ಎಲ್. ಮೊಬೈಲ್ ಸಂಪರ್ಕ ಕಲ್ಪಿಸುವ ನೆಟ್‌ವರ್ಕ್ ಅಸಮರ್ಪಕವಾಗಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವೆ ಒದಗಿಸಲು ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಬಿ.ಎಸ್.ಎನ್.ಎಲ್. ವ್ಯವಸ್ಥಾಪಕ ವೆಂಕಟೇಶ್ ಅವರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣೆ (ದಿಶಾ) ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ತಲೆದೂರಿರುವ ನೆಟ್ವರ್ಕ್ ಸಮಸ್ಯೆಯನ್ನು ಇತ್ಯರ್ಥಗೊಳಿಸುವಲ್ಲಿ ಬಿ.ಎಸ್.ಎನ್.ಎಲ್. ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ಬ್ರಿಟೀಷ್ ಆಡಳಿತ ಪದ್ದತಿಯಿಂದ ಹೊರಬಂದು ಜನಸ್ನೇಹಿಯಾಗಿ ವ್ಯವಹರಿಸಬೇಕು. ಒಂದು ತಿಂಗಳಲ್ಲಿ ನೆಟ್ವರ್ಕ್ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸಬೇಕು ಎಂದರು.

ಗ್ರಾಮಾಂತರ ಭಾಗಗಳಲ್ಲಿ ತೀವ್ರವಾಗಿ ಕಾಡುತ್ತಿರುವ ನೆಟ್ವರ್ಕ್ ಸಮಸ್ಯೆ ತಕ್ಷಣದಿಂದಲೇ ಪರಿಹಾರಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಅನೇಕ ಬಾರಿ ನೆಟ್ವರ್ಕ್ ಸಮಸ್ಯೆ ಪರಿಹರಿಸುವ ಕುರಿತ ಸಭೆಗಳನ್ನು ನಡೆಸಿ, ಯೋಜನೆಯ ರೂಪುರೇಷೆಗಳನ್ನು ಚರ್ಚಿಸಲಾಗಿತ್ತು.

ಆದಾಗ್ಯೂ ಸಮಸ್ಯೆ ಇನ್ನೂ ಜೀವಂತವಾಗಿರುವುದು ಬೇಸರವೆನಿಸಿದೆ. ಟವರ್‌ಗಳನ್ನು ನಿರ್ಮಿಸಲು ಇರುವ ಭೂಸ್ವಾಧೀನ ಪ್ರಕ್ರಿಯೆ, ಕಂದಾಯ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದ ಅವರು, ಜನಸಾಮಾನ್ಯರ ನಿರೀಕ್ಷೆಯಂತೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲೆಯ ಗ್ರಾಮಾಂತರ ಭಾಗ ಸೇರಿದಂತೆ ಸುಮಾರು 141 ನೆಟ್ವರ್ಕ್ ಕಂಬ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 138 ನೆಟ್ವರ್ಕ್ ಸ್ಥಾವರಗಳ ಕಾಮಗಾರಿ ಪ್ರಗತಿಯಲ್ಲಿವೆ. ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ 63 ನೆಟ್ವರ್ಕ್ ಅಳವಡಿಕೆಯಲ್ಲಿ 15 ನೆಟ್ವರ್ಕ್ ಸಂಪರ್ಕ ಕಾರ್ಯ ಪೂರ್ಣಗೊಂಡಿವೆ. ಕಂದಾಯ ಭೂಮಿಗೆ ಸಂಬಂಧಿಸಿದ 55 ಪ್ರಕರಣಗಳಲ್ಲಿ 47 ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿ ಹಾಗೂ ಪಂಚಾಯಿತಿ ವ್ಯಾಪ್ತಿಯಲ್ಲಿ 17 ನೆಟ್ವರ್ಕ್ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುವ ಬಗ್ಗೆ ಬಿ.ಎಸ್.ಎನ್.ಎಲ್. ಅಧಿಕಾರಿ ವೆಂಕಟೇಶ್ ಅವರಿಂದ ಸಂಸದರು ಮಾಹಿತಿ ಪಡೆದರು.

ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ, ತೀರ್ಥಹಳ್ಳಿ ಪಟ್ಟಣ ಪ್ರದೇಶದಲ್ಲಿಯೇ ನೆಟ್ವರ್ಕ್ ಸಮಸ್ಯೆ ವಿಪರೀತವಾಗಿ ಕಾಡುತ್ತಿದೆ. ಬಿಎಸ್‌ಎನ್‌ಎಲ್ ಜನರ ನಿರೀಕ್ಷೆ, ಅಪೇಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

B.Y.Raghavendra ಅದಕ್ಕೆ ಪೂರಕವಾಗಿ ಶಿವಮೊಗ್ಗ ನಗರಕ್ಷೇತ್ರದ ಶಾಸಕ ಎಸ್.ಎನ್.ಚೆನ್ನಬಸಪ್ಪ ಅವರು ಮಾತನಾಡಿ, ನಗರ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತುಂಬಾ ಇದೆ. ಈ ಸಮಸ್ಯೆ ಶಾಸಕರ ಕಚೇರಿಯನ್ನು ಬಿಟ್ಟಿಲ್ಲ. ತುರ್ತು ಸಂದರ್ಭದಲ್ಲಿ ಕಚೇರಿಯಿಂದ ಹೊರ ಬಂದು ಮಾತನಾಡುವ ಪ್ರಸಂಗ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿವಮೊಗ್ಗ-ತಾಳಗುಪ್ಪ ನಡುವೆ ಸಂಚರಿಸುವ ಎಲ್ಲಾ ರೈಲುಗಳು ಮಾರ್ಗದ ಎಲ್ಲಾ ನಿಲ್ದಾಣಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಕನಿಷ್ಟ 02 ನಿಮಿಷಗಳ ಕಾಲ ನಿಲುಗಡೆಗೆ ಅವಕಾಶ ನೀಡುವಂತೆ ಶಾಸಕ ಆರಗ ಜ್ಞಾನೇಂದ್ರ ಸಂಸದರಲ್ಲಿ ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಮಯ ರೈಲು ನಿಲ್ಲಿಸುವ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಾಗರ ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ 2025ರ ಮೇ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು. ಈಗಾಗಲೇ ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಡಿಸೆಂಬರ್ ಮಾಸಾಂತ್ಯದೊಳಗೆ ಸೇತುವೆ ಮೇಲೆ ವಾಹನಗಳು ಪ್ರಾಯೋಗಿಕವಾಗಿ ಸಂಚರಿಸಲಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಎಂದರು.

ಸಾಗರ ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಹೆದ್ದಾರಿಗಳ ಕಾಮಗಾರಿ ಅತ್ಯಂತ ಕಳಪೆ ಮಟ್ಟದಿಂದ ಕೂಡಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಸಾಕಷ್ಟು ದೂರುಗಳು ಬಂದಿವೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕೂಡಲೇ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಬಿ.ವೈ.ರಾಘವೇಂದ್ರ, ಸಂಸದರು.
ಶಿವಮೊಗ್ಗ-ರಾಣೆಬೆನ್ನೂರು ರೈಲುಮಾರ್ಗಕ್ಕೆ ಸಂಬAಧಿಸಿದAತೆ ಶೇ. ೯೦ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿರಬೇಕು. ಇದರಿಂದ, ಕೇಂದ್ರ ಸರ್ಕಾರಕ್ಕೆ ಅನುದಾನದ ಬೇಡಿಕೆ ಸಲ್ಲಿಸಲು ಅನುಕೂಲವಾಗಲಿದೆ ಇಲ್ಲಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಭೂಸ್ವಾಧೀನ ಪಡಿಸಿಕೊಳ್ಳುವ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ಭೂಸ್ವಾದೀನಕ್ಕೆ ಸಂಬAಧಿಸಿದAತೆ ಯಾವುದೇ ರೈತರಿಗೆ ಹಂಚುವ ಪರಿಹಾರದಲ್ಲಿ ಅನ್ಯಾಯವಾಗಬಾರದು. ಭೂಮಿ ವಶಪಡಿಸಿಕೊಂಡ ರೈತರಿಗೂ ಸಹ ಶೇ. ೯೦ರಷ್ಟು ಹಣ ಸಂದಾಯವಾಗಿರಬೇಕು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶ್ರೀಮತಿ ಶಾರದಾ ಪೂರ್ಯಾನಾಯ್ಕ್, ಶ್ರೀಮತಿ ಬಲ್ಕಿಷ್‌ಬಾನು, ಡಾ|| ಧನಂಜಯಸರ್ಜಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....