Sunday, November 17, 2024
Sunday, November 17, 2024

Department of Youth Empowerment and Sports ಯುವಜನರ ಪ್ರತಿಭೆ ಪ್ರೋತ್ಸಾಹಕ್ಕೆ ಸರ್ಕಾರ ಅನೇಕ ವೇದಿಕೆಗಳನ್ನ ಸೃಷ್ಟಿಸುತ್ತಿದೆ- ಶಾಸಕಿ ಬಲ್ಕೀಷ್ ಬಾನು

Date:

Department of Youth Empowerment and Sports ಯುವಜನರ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಸಹಾಯಕವಾಗಿದೆ. ಯುವ ಸಮೂಹವು ತಮ್ಮ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ ಎಂದು ವಿಧಾನ ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಷ್ ಬಾನು ಅವರು ಹೇಳಿದರು.
ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿ.ವಿ. ಹಾಗೂ ನಿಸರ್ಗ ಮಹಿಳಾ ಮಂಡಳಿ ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಯುವಜನರಲ್ಲಿ ಅನೇಕ ಕೌಶಲ್ಯ, ಕಲೆ ಇದೆ. ಅದನ್ನು ಬಳಸಿಕೊಂಡು ವ್ಯಕ್ತಿತ್ವ ಬೆಳವಣಿಗೆ ಮಾಡಿಕೊಂಡು ಅವಕಾಶ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
Department of Youth Empowerment and Sports ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಮಾತನಾಡಿ ಕಾಲ ನಿಧಾನವಾಗಿ ಬದಲಾವಣೆ ಆಗಿದೆ. ಇಂದು ಮನೆಗಳಲ್ಲಿ ಜನರ ಸಂಖ್ಯೆ ಕಡಿಮೆ ಇರುವ ಕಾರಣ ಯುವಜನರ ಮೇಲೆ ಜವಾಬ್ಧಾರಿ ಹೆಚ್ಚಾಗಿದೆ. ಪಠ್ಯೇತರ ಚಟುವಟಿಕೆಗಳಿಗೆ ಇಂದು ಹೆಚ್ಚು ಅವಕಾಶಗಳನ್ನು ನೀಡಲಾಗುತ್ತಿದೆ ಎಂದರು. ಯುವಜನರ ಸಾಂಸ್ಕೃತಿಕ ಕಲೆಯನ್ನು ಪ್ರೋತ್ಸಾಹಿಸಲು ಸರ್ಕಾರವು ಪೂರಕವಾದ ವಾತವರಣ ಸೃಷ್ಟಿಸಿದೆ. ಇಂದು ಕಂಪ್ಯೂಟರ್, ಟಿ.ವಿ., ಮೊಬೈಲ್‌ಗಳಲ್ಲಿ ಹೆಚ್ಚು ಕಾಲಕಳೆಯುವುದನ್ನು ಬಿಡಬೇಕು, ಆರೋಗ್ಯಕರವಾದ ಅಭ್ಯಾಸಗಳನ್ನು ಹೊಂದಬೇಕು ಎಂದರು. ಭಾರತದ ಅಮೂಲ್ಯವಾದ ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಬೆಳಸುವುದು ಮತ್ತು ಉಳಿಸುವುದು ಯುವ ಸಮೂಹದ ದೊಡ್ಡ ಜವಾಬ್ಧಾರಿ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ರವಿಕುಮಾರ್ ಎಸ್. ಮಾತನಾಡಿ ನಮ್ಮ ದೇಶದ ಕಲೆ, ಸಾಹಿತ್ಯ ಮರೆಯುವಂತಹ ಪರಿಸ್ಥಿತಿ ಎದುರಾಗಿದೆ. ಆದರೆ ಈ ರೀತಿಯ ಕಾರ್ಯಕ್ರಮದ ಮೂಲಕ ಮತ್ತೆ ಪುರ್ನಜನ್ಮ ಆಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡೋಣ ಎಂದು ಹೇಳಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷರಾದ ಸಿ.ಎಸ್ ಚಂದ್ರಭೂಪಾ¯ ಮಾತನಾಡಿ ರಾಷ್ಟ್ರಕ್ಕೆ ಶಕ್ತಿ ಬರಲು ಯುವ ಶಕ್ತಿಯೇ ಮುಖ್ಯ, ನಮ್ಮಲ್ಲಿ ಅಡಗಿರುವ ಕಲೆ, ಕೌಶಲ್ಯವನ್ನು ಎಚ್ಚರಿಸಬೇಕಾಗಿದೆ. ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬಲಿಷ್ಠಗೊಳಿಸುವ ಕಾರ್ಯ ಯುವಜನತೆ ಮಾಡಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ನಿಸರ್ಗ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಭಾರತಿ, ನೆಹರು ಯುವ ಕೇಂದ್ರ ಯುವ ಅಧಿಕಾರಿ ಉಲ್ಲಾಸ ಕೆ.ಟಿ.ಕೆ., ಯುವಜನೋತ್ಸವ ಸ್ಪರ್ಧಿಗಳು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related