CM Siddharamaiah ಬೆಂಗಳೂರು ಟೆಕ್ ಸಮ್ಮಿಟ್ – 2024 ಕಾರ್ಯಕ್ರಮದಲ್ಲಿ ನಿಮ್ಮನ್ನು ಕುರಿತು ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ.
ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ.
ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು.
ಬೆಂಗಳೂರಿನಲ್ಲಿ ನಡೆದ ಟೆಕ್ ಸಮೀಟ್ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
20ನೇ ಶತಮಾನದ ಆರಂಭದಲ್ಲಿ, ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು.
2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು. ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ ಹಾಕಲಾಯಿತು.
CM Siddharamaiah ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ.
ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ ಉತ್ತೇಜಿಸಿದೆ.
ಈ ಹೆಮ್ಮೆಯ ಪರಂಪರೆಯನ್ನು ಆಧರಿಸಿ ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಂಡ ಬೆಳವಣಿಗೆಗೆ ನಮ್ಮ ಬದ್ಧತೆ ಆಚಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.