DVS College of Arts and Science ಶಿಕ್ಷಣದಲ್ಲಿ ಪ್ರಗತಿ ಸಾಧಿಸುವುದು ಉತ್ತಮ ಜೀವನ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಅಭಿಪ್ರಾಯಪಟ್ಟರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಲಾ ಕಾಲೇಜಿನ ಹಂತದಲ್ಲಿಯೇ ನೀವು ಅಧ್ಯಯನ ಮಾಡುವ ಆಸಕ್ತಿ ವಿಷಯಗಳ ಬಗ್ಗೆ ಅರಿತುಕೊಳ್ಳಬೇಕು. ನಿಮ್ಮ ಇಷ್ಟದ ವಿಷಯದಲ್ಲಿ ಉನ್ನತ ಪದವಿ ಪಡೆಯಬೇಕು. ಇದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು ಶಿಕ್ಷಣ ಪಡೆಯುವ ವೇಳೆಯಿಂದಲೇ ಹಂತ ಹಂತವಾಗಿ ಪ್ರಯತ್ನ ಆರಂಭಿಸಬೇಕು ಎಂದು ತಿಳಿಸಿದರು.
DVS College of Arts and Science ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆ.ಭಾಸ್ಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾಭ್ಯಾಸ, ಓದು ತುಂಬಾ ಮುಖ್ಯ. ಎಲ್ಲರೂ ತಮ್ಮ ಗುರಿಯನ್ನು ಸಾಧಿಸುವಲ್ಲಿ ಮುನ್ನುಗ್ಗುವ ಅಭಿಲಾಷೆ ಹೊಂದಬೇಕು. ಗುರು ಹಿರಿಯರ ಮಾರ್ಗದರ್ಶನ ಪಡೆದು ಯಶಸ್ಸಿನತ್ತ ಮುನ್ನಡೆಯಬೇಕು. ನಿಮ್ಮ ಗುರಿ ಸಾಧಿಸುವ ಜತೆಯಲ್ಲಿ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ದ್ವಿತೀಯ, ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳು ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಿದರು. ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಖಜಾಂಚಿ ಬಿ.ಗೋಪಿನಾಥ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿ.ಇ.ರುದ್ರೇಶ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.